Ad Widget .

ಪ್ರಜ್ವಲ್‌ ರೇವಣ್ಣಗೆ ಕೊಂಚ ರಿಲೀಫ್| ಅನರ್ಹತೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅಸಿಂಧುಗಳಿಸಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್​ ರೇವಣ್ಣ ಸಂಸದ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.

Ad Widget . Ad Widget .

ಸಂಸದ ಸ್ಥಾನ ಅಸಿಂಧುಗಳಿಸಿದ್ದ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್‌ ಅವರು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದರು. ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ್‌, ಪರಡಿವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ಪೀಠ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಮುಂದಿನ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ಜಾರಿಯಲ್ಲಿರುತ್ತದೆ. ಬಳಿಕ ಮುಂದಿನ ವಿಚಾರಣೆ ನಡೆದು ಅಂತಿಮ ತೀರ್ಮಾನ ಪ್ರಕಟವಾಗಲಿದೆ.

Ad Widget . Ad Widget .

ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಆರೋಪ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿರುವ ಅಂದಿನ ಬಿಜೆಪಿಯ ಎ.ಮಂಜು ಅರ್ಜಿ ಸಲ್ಲಿಕೆ ಮಾಡಿದ್ದರು.

Leave a Comment

Your email address will not be published. Required fields are marked *