Ad Widget .

ಸುಳ್ಯ: ಬಾಡಿಗೆ ಆಟೋ ಸೋಗಿನಲ್ಲಿ ಪ್ರಯಾಣಿಕನ ದರೋಡೆ| 3.5 ಲಕ್ಷ ನಗದು, ಮೊಬೈಲ್ ಕಳವು

ಸಮಗ್ರ ನ್ಯೂಸ್: ಬಾಡಿಗೆ ಆಟೋದ ಸೋಗಿನಲ್ಲಿ ದರೋಡೆಕೋರರು ಪ್ರಯಾಣಿಕನನ್ನು ದರೋಡೆಗೈದ ಘಟನೆ ಸುಳ್ಯದ ಹಳೆಗೇಟು ಬಳಿ‌ ಸೆ. 18ರ ತಡರಾತ್ರಿ ನಡೆದಿದೆ.

Ad Widget . Ad Widget .

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್‌ ‌(27ವ)ವಂಚನೆಗೆ ಒಳಗಾದವರು. ಇವರು ವೈಯಕ್ತಿಕ ಕೆಲಸದ ನಿಮಿತ್ತ ಸೆ 18 ರಂದು ಸುಳ್ಯಕ್ಕೆ ಬಂದಿದ್ದರು. ಅದೇ ದಿನ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ ವಾಹನಕ್ಕೆ ಕಾಯುತ್ತಿದ್ದರು. ಈ ವೇಳೆ ಆಟೋರಿಕ್ಷಾ ವೊಂದು ಆಗಮಿಸಿದ್ದು, ಅದರಲ್ಲಿ ಆಗಲೇ ಇಬ್ಬರು ಪ್ರಯಾಣಿಕರು ಹಿಂಬದಿ ಸೀಟಿನಲ್ಲಿ ಕೂತಿದ್ದರು.

Ad Widget . Ad Widget .

ದರ್ಶನ್‌ ಅವರು ಆ ಅಟೋ ರಿಕ್ಷಾ ಹತ್ತಿದ್ದು, ಆಗ ಚಾಲಕ ಹಾಗೂ ಪ್ರಯಾಣಿಕರಿಬ್ಬರು ಸೇರಿ ಅವರ ಕೈಯಲ್ಲಿದ್ದ ಬ್ಯಾಗ್‌‌ ನ್ನು ಕಿತ್ತುಕೊಳ್ಳಲು ಪ್ರಯತ್ನಿಸಿರುತ್ತಾರೆ. ಇದನ್ನು ವಿರೋಧಿಸಿದಾಗ, ದುಷ್ಕರ್ಮಿಗಳು ದರ್ಶನ್‌ಗೆ ಹಲ್ಲೆ ನಡೆಸಿ, ಬ್ಯಾಗನ್ನು ಕಿತ್ತುಕೊಂಡು ಅವರನ್ನು ಮೂವರು ಸೇರಿ ರಿಕ್ಷಾದಿಂದ ದೂಡಿ ಹಾಕಿ ಆಟೋದಲ್ಲಿ ಪರಾರಿಯಾಗಿರುತ್ತಾರೆ.

ಬ್ಯಾಗಿನಲ್ಲಿ ವ್ಯವಹಾರದ ಹಣ ಒಟ್ಟು 3.5 ಲಕ್ಷ ರೂಪಾಯಿ, ಎರಡು ಮೊಬೈಲ್ ಗಳು, ಗುರುತಿನ ಚೀಟಿಗಳು ಹಾಗೂ ಮೂರು ಎಟಿಎಂ ಕಾರ್ಡ್ ಗಳಿದ್ದವು. ಘಟನೆಯ ಸಮಯ ಅಟೋ ರಿಕ್ಷಾದ ನೋಂದಣಿ ಸಂಖ್ಯೆಯನ್ನು ಪಿರ್ಯಾದಿರವರು ಗಮನಿಸಿರುವುದಿಲ್ಲ ಎಂಬುದಾಗಿ ಸುಳ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *