ಕಾವೇರಿ‌ ನದಿ ನೀರು ಬಿಕ್ಕಟ್ಟು| ಮೌನಕ್ಕೆ ಶರಣಾದ ಸ್ಯಾಂಡಲ್ ವುಡ್ ನಟರ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್: ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂಬ ಸೆ.12ರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ.

Ad Widget ... ..

ಕಾವೇರಿ ಹೋರಟ ದಿನೇ ದಿನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈವರೆಗೂ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಸ್ಯಾಂಡಲ್​ವುಡ್​ ನಟರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

Ad Widget

ಕನ್ನಡ ಚಿತ್ರರಂಗದ ನಟರ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ. ತಮ್ಮ ಸ್ವಾರ್ಥಕ್ಕಾಗಿ ರಾಜ್ಯದ ಹಿತಾಶಕ್ತಿಯನ್ನು ಬಲಿ ಕೊಡುತ್ತಿದ್ದಾರೆ ಮತ್ತು ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ ಎಂದು ರೈತರು ಹಾಗೂ ರೈತ ಪರ ಸಂಘಟನೆಗಳು ನಟರಾದ ಶಿವರಾಜ್​ಕುಮಾರ್​, ಸುದೀಪ್​, ದರ್ಶನ್​ ಮತ್ತು ಯಶ್​ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಡಾ. ರಾಜ್​ಕುಮಾರ್​, ವಿಷ್ಣುವರ್ಧನ್​, ಅಂಬರೀಷ್​ ಕಾಲದಲ್ಲಿ ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಬಂದರೂ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಆದರೆ, ಇಂದು ಯಾರೋಬ್ಬರು ಧ್ವನಿಗೂಡಿಸದೇ ಇರುವುದು ನಿಜಕ್ಕೂ ದುಃಖಕರ ಸಂಗತಿಯಾಗಿದೆ. ತಮ್ಮ ಸಿನಿಮಾಗಳ ಸ್ವಾರ್ಥ ಸಾಧನೆಗಾಗಿ ಈ ರೀತಿಯ ನಡೆ ಒಳ್ಳೆಯದಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

Leave a Comment

Your email address will not be published. Required fields are marked *