Ad Widget .

ಅ.5ರಂದು ಸಾರಿಗೆ ಸಿಬ್ಬಂದಿ ಮುಷ್ಕರ| ಹಲವು ಬೇಡಿಕೆಗಳಿಗೆ ಹಕ್ಕೊತ್ತಾಯ

ಸಮಗ್ರ ನ್ಯೂಸ್: ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Ad Widget . Ad Widget .

ಕೆ.ಎಸ್.ಆರ್.ಟಿ.ಸಿ. ನಿಗಮಗಳ ಒಕ್ಕೂಟದ(CITU) ಅಧ್ಯಕ್ಷ ಹೆಚ್.ಡಿ. ರೇವಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. 2020 ಜನವರಿ 1ರ ನಂತರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್ ಗಳಿಗೆ ನಮ್ಮ ನೌಕರರೇ ಚಾಲಕರಾಗಬೇಕು. ಈ ಹಿಂದೆ ಪ್ರತಿಭಟನೆ ನಡೆಸಿದಾಗ ವಜಾಗೊಳಿಸಿದ್ದ ಎಲ್ಲಾ ನೌಕರರನ್ನು ವಾಪಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Ad Widget . Ad Widget .

ನಾಲ್ಕು ನಿಗಮಗಳ ನೌಕರರು ಅಕ್ಟೋಬರ್ 5ರಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅ. 5 ರಂದು ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *