Ad Widget .

“ಸದನದೊಳಗಷ್ಟೇ ಗಲಾಟೆ ನಡೆಯುತ್ತೆ, ಹೊರಗಡೆ ಎಲ್ರೂ ಸ್ನೇಹಿತರೇ. ನಮ್ಮನ್ನು ನೋಡಿ ನೀವು ಗಲಾಟೆ ಮಾಡಿಕೊಳ್ಬೇಡಿ”| ಗಣೇಶೋತ್ಸವದಲ್ಲಿ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು

”ನಾನು ಸ್ಪೀಕರ್ ಆದ ಬಳಿಕ ಪ್ರತಿಪಕ್ಷಗಳಿಗೆ ಹೆಚ್ಚಿನ ಅವಕಾಶ ಕೊಟ್ಟು ಸರಕಾರವನ್ನು ಸೂಕ್ತ ರೀತಿಯಲ್ಲಿ ನಡೆಯಲು ನನ್ನಿಂದಾದ ಸಹಕಾರ ನೀಡುತ್ತಿದ್ದೇನೆ. ಆದರೆ ಇದೇ ಕಾರಣಕ್ಕೆ ಸ್ಪೀಕರ್ ಸರಿಯಿಲ್ಲ ಎನ್ನುವವರೂ ಇದ್ದಾರೆ. ವಿಧಾನಸಭೆಯಲ್ಲಿ ನಡೆಯುವ ಗಲಾಟೆಗಳು ಕೇವಲ ಅಲ್ಲಿಗೆ ಮಾತ್ರ ಸೀಮಿತವಾಗಿರುತ್ತೆ ಹೊರಗಡೆ ಎಲ್ಲಾ ಪಕ್ಷಗಳ ನಾಯಕರು ಹೆಗಲ ಮೇಲೆ ಕೈಹಾಕಿಕೊಂಡು ಸ್ನೇಹಿತರಂತೆ ಇರುತ್ತಾರೆ. ಹೀಗಾಗಿ ಕೇವಲ ಗಲಾಟೆಯನ್ನು ಮಾತ್ರ ಟಿವಿಯಲ್ಲಿ ನೋಡಿ ಇಲ್ಲಿ ಗಲಾಟೆ ಮಾಡಿಕೊಳ್ಳಬೇಡಿ” ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕಿವಿಮಾತು ಹೇಳಿದರು.

Ad Widget . Ad Widget .

ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೆಲ್ ನ ಓಂಕಾರ‌ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದರು.

Ad Widget . Ad Widget .

“ಬಂಟ್ಸ್ ಹಾಸ್ಟೆಲ್ ನಲ್ಲಿ ಕೇವಲ ಬಂಟರು ಮಾತ್ರವಲ್ಲದೆ ಹಿಂದೂ ಮುಸ್ಲಿಂ ಕ್ರೈಸ್ತರು ಎಲ್ಲರೂ ವಾಸ್ತವ್ಯವಿದ್ದು ಕಲಿಯುತ್ತಿದ್ದಾರೆ. ಇದು ಇಡೀ ಸಮಾಜಕ್ಕೆ ಮಾದರಿ. ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಬಂಟ ಸಮಾಜಕ್ಕೆ ಇದ್ದು ಆ ಜವಾಬ್ದಾರಿಯನ್ನು ಬಂಟ ಸಮುದಾಯದ ಹಿರಿಯರು ತೆಗೆದುಕೊಳ್ಳಬೇಕು. ಗಣೇಶೋತ್ಸವ ಅನ್ನುವ ಧಾರ್ಮಿಕ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲಿ, ಗಣೇಶನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ” ಎಂದು ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.

ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಮ್ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ.ನಾಗರಾಜ ಶೆಟ್ಟಿ, ಎಮ್ ಸಂಜೀವ ಶೆಟ್ಟಿ ಕಾಸರಗೋಡು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *