Ad Widget .

ಎನ್ ಡಿಎ ಸೇರಿದ ಜೆಡಿಎಸ್| ಕೊನೆಗೂ ಕಮಲ ಮುಡಿದ ತೆನೆಹೊತ್ತ ಮಹಿಳೆ

ಸಮಗ್ರ ನ್ಯೂಸ್: ʼʼಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆʼʼ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ.

Ad Widget . Ad Widget .

ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ, ʼʼಜೆಡಿಎಸ್ ಎನ್ ಡಿಎ ಮೈತ್ರಿ ಕೂಟಕ್ಕೆ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆʼʼ ಎಂದು ಹೇಳಿದ್ದಾರೆ.

Ad Widget . Ad Widget .

ʼʼಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ. ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲʼʼ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

Leave a Comment

Your email address will not be published. Required fields are marked *