Ad Widget .

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಮುಂದಾದ ಯುವತಿ ಬೆಂಗಳೂರಿನಲ್ಲಿ ಕಟ್ಟಡದಿಂದ ಹಾರಿದಳು!!

ಸಮಗ್ರ ನ್ಯೂಸ್: ಯುವತಿಯೊಬ್ಬಳು ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ.

Ad Widget . Ad Widget .

ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Ad Widget . Ad Widget .

ಕೆಲವು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗ ಸ್ಥಳೀಯರೊಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು. ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ ಯುವತಿಯನ್ನು ವಾಪಸ್ ಕಳುಹಿಸಿದ್ದರು.

ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದು ಈಗ ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿ ಆತ್ಮಹತ್ಯೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *