ಸುಳ್ಯ: ಬೈಕ್ – ಕಾರು ಅಫಘಾತ: ಓರ್ವ ಗಂಭೀರ

ಸಮಗ್ರ ನ್ಯೂಸ್: ಬೈಕ್ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಸುಳ್ಯ ತಾಲುಕಿನ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಸೆ.23ರಂದು ಸಂಭವಿಸಿದೆ.

Ad Widget ... ..

ಸುಳ್ಯದ ಜಿ.ಎಲ್. ಆಚಾರ್ಯ ಉದ್ಯೋಗಿರುವ ಪ್ರಶಾಂತ್ ಮತ್ತು ಅವರ ಪತ್ನಿ ಗಾಯಗೊಂಡವರು. ಇವರು ಬೈಕ್ ನಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ
ಬಾಂಜಿಕೋಡಿ ತಿರುವಿನಲ್ಲಿ ಎದುರಿನಿಂದ ಬಂದ ಕಾರು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಪರಿಣಾಮ ಪ್ರಶಾಂತ್ ಮತ್ತು ಅವರ ಪತ್ನಿ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Ad Widget

ಪ್ರಶಾಂತ್ ರವರಿಗೆ ಗಂಭೀರ ಗಾಯಗೊಂಡಿರುವುದರಿಂದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *