Ad Widget .

ಸುಳ್ಯದ 6 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ್ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ವತಿಯಿಂದ ನಡೆದ ಗುರುವಂದನಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ, ಸಾವಿತ್ರಿ ಬಾಯಿ ಪುಲೆ ರಾಷ್ಟೀಯ ಪ್ರಶಸ್ತಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಾಧಕ ರತ್ನ ರಾಷ್ಟೀಯ ಪ್ರಶಸ್ತಿ ಸಮಾರಂಭವು ಸೆ.24 ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯಿತು.

Ad Widget . Ad Widget .

ಶಿಕ್ಷಕ ದಿನಾಚರಣೆಯ ನಿಮಿತ್ಯ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಿ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಯಿತು. ಈ ವೇಳೆ ಸುಳ್ಯದ 6 ಜನ ಶಿಕ್ಷಕರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು.

Ad Widget . Ad Widget .

ಅನುರಾಧ ಕುರುಂಜಿ ಇವರು ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿ ಕನ್ನಡ ಪ್ರಾಧ್ಯಾಪರಾಗಿ ಸೇವೆ ಸಲ್ಲಿಸುತ್ತಿದ್ದು, ಇವರ ಶಿಕ್ಷಣ, ಸಾಹಿತ್ಯ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಜಯಪ್ರಸಾದ್ ಕಾರಿಂಜ ಇವರು ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರ ಶಿಕ್ಷಣ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ಸಾಧಕ ರತ್ನ ರಾಷ್ಟೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪೂರ್ಣಿಮಾ ಜಯಪ್ರಸಾದ್ ಇವರು ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿ ಕನ್ನಡ, ಪರಿಸರ ಅಧ್ಯಯನ, ಗಣಿತ ಮತ್ತು ಇಂಗ್ಲಿಷ್, ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದು. ಇವರ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಗುರುತಿಸಿ ಸಾವಿತ್ರಿಬಾಯಿ ಪುಲೆ ರಾಷ್ಟೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ರಶ್ಮಿ ಎಸ್. ಎಸ್ ಇವರು ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರ ಶಿಕ್ಷಣ ಮತ್ತು ಕಲಾ ಸೇವೆಯನ್ನು ಗುರುತಿಸಿ ಸಾವಿತ್ರಿಬಾಯಿ ಪುಲೆ ರಾಷ್ಟೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಮೀಳಾ ರಾಜ್ ಇವರು ಸರಕಾರಿ ಹಿರಿಯಪ್ರಾಥಮಿಕ ಶಾಲೆ ದೇವರಕಾನದಲ್ಲಿ ಪ್ರಭಾರ ಪ್ರಾಂಶುಪಾಲರಾಗಿ ಹಾಗೂ ಕನ್ನಡ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಇವರ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಗುರುತಿಸಿ ಸಾವಿತ್ರಿ ಬಾಯಿ ಪುಲೆ ರಾಷ್ಟೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪರಿಮಳ ಎನ್. ಎಂ ಇವರು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿ ಕನ್ನಡ ಪ್ರಾಧ್ಯಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಗುರುತಿಸಿ ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Leave a Comment

Your email address will not be published. Required fields are marked *