ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ್ಯು

ಸಮಗ್ರ ನ್ಯೂಸ್:‌ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಓರ್ವ ಸಾವನ್ನಪ್ಪಿ ಮತ್ತೋರ್ವರಿಗೆ ಗಾಯವಾದ ಘಟನೆ ಭಾನುವಾರ ಸಂಜೆ ಕಡಬದಲ್ಲಿ ಸಂಭವಿಸಿದೆ.

. Ad Widget . Ad Widget

ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಮೃತ ದುರ್ದೈವಿ. ಮೃತರು ಭಾನುವಾರ ಸಂಜೆ ಹಾಲು ಡಿಪೋ ಗೆ ಬಂದು ಕಡಬ ಮುಖ್ಯ ಪೇಟೆಯಿಂದ ಕಾಲೇಜು ರಸ್ತೆಯ ಸಮೀಪ ತಲುಪುವ ವೇಳೆ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಚ್ಚುತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ.

. Ad Widget . . Ad Widget . Ad Widget

ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ಸಿನಲ್ಲಿ ಬಾಗಿಲು ಇದ್ದರೂ ಬಾಗಿಲು ಹಾಕಲಿಲ್ಲವೇಕೆ ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.

Leave a Comment

Your email address will not be published. Required fields are marked *