Ad Widget .

ಏಷ್ಯನ್ ಗೇಮ್ಸ್; ಚೀನಾದಲ್ಲಿ ಲಂಕಾದಹನ ಮಾಡಿದ ಭಾರತೀಯ ವನಿತೆಯರು| ಮಹಿಳಾ ಕ್ರಿಕೆಟ್ ನಲ್ಲಿ ಚಿನ್ನದ ಪದಕ ಗೆದ್ದ ಕೌರ್ ಪಡೆ

Ad Widget . Ad Widget .

ಸಮಗ್ರ ನ್ಯೂಸ್: ಸ್ಮೃತಿ ಮಂಧನಾ, ಜೆಮಿಯಾ ರೋಡ್ರಿಗ್ಸ್‌ ಸಮಯೋಚಿತ ಬ್ಯಾಟಿಂಗ್ ಹಾಗೂ ತಿತಾಸ್ ಸಧು ಮಿಂಚಿನ ದಾಳಿಯ ನೆರವಿನಿಂದ ಏಷ್ಯನ್ ಗೇಮ್ಸ್‌ ಮಹಿಳಾ ಕ್ರಿಕೆಟ್ ಫೈನಲ್‌ನಲ್ಲಿ ಶ್ರೀಲಂಕಾ ಎದುರು 10 ರನ್‌ ರೋಚಕ ಜಯ ಸಾಧಿಸಿದೆ. ಈ ಮೂಲಕ ಲಂಕಾ ದಹನ ಮಾಡಿದ ಹರ್ಮನ್‌ಪ್ರೀತ್ ಕೌರ್ ಪಡೆ ಚಿನ್ನದ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಗಿದೆ.

Ad Widget . Ad Widget .

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಮಹಿಳಾ ಕ್ರಿಕೆಟ್ ತಂಡವು ಆರಂಭದಲ್ಲೇ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ವಿಕೆಟ್ ಕಳೆದುಕೊಂಡಿತು. ಶಫಾಲಿ ವರ್ಮಾ 15 ಎಸೆತಗಳನ್ನು ಎದುರಿಸಿ 1 ಬೌಂಡರಿ ಬಾರಿಸಿ ಸುಗಂದಿಕಾ ಕುಮಾರಿ ಬೌಲಿಂಗ್‌ನಲ್ಲಿ ಸ್ಟಂಪೌಟ್‌ ಆಗಿ ಪೆವಿಲಿಯನ್ ಸೇರಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಸ್ಮೃತಿ ಮಂಧನಾ ಹಾಗೂ ಜೆಮಿಯಾ ರೋಡ್ರಿಗ್ಸ್‌ ಜವಾಬ್ದಾರಿಯುತ 73 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸಾಕಷ್ಟು ವಿಚಿತ್ರವಾಗಿ ವರ್ತಿಸುತ್ತಿದ್ದ ಪಿಚ್‌ನಲ್ಲಿ ನೆಲಕಚ್ಚಿ ಆಡುವ ಮೂಲಕ ತಂಡಕ್ಕೆ ಆಸರೆಯಾದರು.

ಎಡಗೈ ಬ್ಯಾಟರ್ ಸ್ಮೃತಿ ಮಂಧನಾ 45 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 46 ರನ್ ಗಳಿಸಿ ರಣವೀರ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಜೆಮಿಯಾ ರೋಡ್ರಿಗ್ಸ್‌ ಕೊನೆಯ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಜೆಮಿಯಾ ಪೆವಿಲಿಯನ್ ಸೇರುವ ಮುನ್ನ 40 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಭಾರತ ಪರ ಸ್ಮೃತಿ ಮಂಧನಾ ಹಾಗೂ ಜೆಮಿಯಾ ರೋಡ್ರಿಗ್ಸ್ ಹೊರತುಪಡಿಸಿ ಯಾವೊಬ್ಬ ಬ್ಯಾಟರ್ ಕೂಡ ಎರಡಂಕಿ ಮೊತ್ತ ದಾಖಲಿಸಲು ಸಫಲರಾಗಲಿಲ್ಲ.

Leave a Comment

Your email address will not be published. Required fields are marked *