ಕಾವೇರಿ ಕಿಚ್ಚು: ರಾಮನಗರದಲ್ಲಿ ಸ್ಟಾಲಿನ್ ಅಣುಕು ತಿಥಿ

ಸಮಗ್ರ ನ್ಯೂಸ್: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಜಿಲ್ಲಾ ಕರ್ನಾಟಕ ಜನಪರ ವೇದಿಕೆ ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

. Ad Widget . Ad Widget . Ad Widget .

ಅಷ್ಟೇ ಅಲ್ಲದೆ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು ಘೋಷಣೆ ಕೂಗಿ ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರಾಮನಗರ ಜಿಲ್ಲೆಯ ವಿವಿಧ ರೈತ ಹಾಗೂ ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಇಂದು ರಾಮನಗರ, ಚನ್ನಪಟ್ಟಣ, ಬಿಡದಿ ಸಂಪೂರ್ಣ ಸ್ತಬ್ಧವಾಗಲಿದೆ, ಮೆಡಿಕಲ್, ಆಸ್ಪತ್ರೆ, ಹಾಲಿನ ಅಂಗಡಿ, ರೇಷ್ಮೆ ಮಾರುಕಟ್ಟೆ ಹೊರತು ಪಡಿಸಿ ಉಳಿದೆಲ್ಲ ಸೇವೆ ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಸಂಪೂರ್ಣ ಬಂದ್‌ ಆಗಲಿದೆ. ಬೆಳಗ್ಗೆ ಹತ್ತು ಗಂಟೆಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮೌನ ಪ್ರತಿಭಟನೆ ನಡೆಸಲಿರುವ ಹೋರಾಟಗಾರರು, ಬಳಿಕ ಹಳೇ ಮೈಸೂರು-ಬೆಂಗಳೂರು ಹೆದ್ದಾರಿ ತಡೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

Leave a Comment

Your email address will not be published. Required fields are marked *