Ad Widget .

₹2000 ನೋಟು ಬದಲಾವಣೆಗೆ ನಾಲ್ಕೇ ದಿನ ಬಾಕಿ| ಸೆ.30 ಕೊನೆಯ ದಿನ

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಪ್ ಆಫ್ ಇಂಡಿಯಾ (ಆರ್‌ಬಿಐ) ಮೇ 19 ರಂದು 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಗಡುವು ಮುಗಿಯಲು ಕೆಲವೇ ನಾಲ್ಕು ದಿನಗಳು ಉಳಿದಿವೆ.

Ad Widget . Ad Widget .

ಈ ಗಡುವಿಗೂ ಮುನ್ನವೇ ನೀವು ನೋಟುಗಳನ್ನು ಬದಲಾವಣೆ ಮಾಡಬೇಕಾಗುತ್ತದೆ.2000 ರೂಪಾಯಿ ನೋಟುಗಳನ್ನು ಜನರು ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಡೆಪಾಸಿಟ್ ಮಾಡುವಂತೆ ಅಥವಾ ಬದಲಾವಣೆ ಮಾಡಿಕೊಳ್ಳುವಂತೆ ಕೇಂದ್ರ ಬ್ಯಾಂಕ್ ವಿನಂತಿ ಮಾಡಿದೆ.

Ad Widget . Ad Widget .

ಜನರು ಸೆಪ್ಟೆಂಬರ್ 30 ರವರೆಗೆ ತಮ್ಮ ಬ್ಯಾಂಕ್ ಖಾತೆಗಳಲ್ಲಿ 2,000 ರೂಪಾಯಿ ನೋಟುಗಳನ್ನು ಡೆಪಾಸಿಟ್ ಮಾಡಬಹುದು ಅಥವಾ ಬದಲಾವಣೆ ಮಾಡಿಕೊಳ್ಳಬಹುದು. ಮೇ 23 ಯಾರಲ್ಲಿ 2000 ರೂಪಾಯಿ ನೋಟು ಇದೆಯೋ ಅವರು ದೇಶಾದ್ಯಂತ ಎಲ್ಲ ಬ್ಯಾಂಕ್‌ಗಳಲ್ಲಿ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಬ್ಯಾಂಕ್ ಶಾಖೆಗಳ ನಿಯಮಿತ ಕಾರ್ಯನಿರ್ವಹಣೆಯಲ್ಲಿ ಅಡಚಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಒಂದು ಬಾರಿಗೆ 20,000 ರೂಪಾಯಿ ಮೌಲ್ಯದ 2000 ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. 2000 ರೂಪಾಯಿ ನೋಟುಗಳನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲು ಕೆವೈಸಿ ಮಾನದಂಡಗಳು ಹಾಗೂ ಇತರೆ ಕಾನೂನು ಪ್ರಕ್ರಿಯೆಗಳು ಅವಶ್ಯಕವಾಗಿದೆ.

Leave a Comment

Your email address will not be published. Required fields are marked *