Ad Widget .

ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ

ಸಮಗ್ರ ನ್ಯೂಸ್ : ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಘಾತ ಆಗಿದೆ.
ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ, ಸಿನಿಪ್ರಿಯರಿಗೆ ಆತಂಕ ಕಾಡಲು ಆರಂಭವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Ad Widget . Ad Widget .

ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದು ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *