Ad Widget .

ವ್ಯರ್ಥವಾದ ರೋಹಿತ್, ವಿರಾಟ್ ಅರ್ಧಶತಕ| ಆಸ್ಟ್ರೇಲಿಯಾಗೆ 80 ರನ್ ಗಳ ಭರ್ಜರಿ ಗೆಲುವು| ಸರಣಿ ಗೆದ್ದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅರ್ಧಶತಕದ ಹೊರತಾಗಿಯೂ ಭಾರತ ತಂಡ 66 ರನ್ ಗಳಿಂದ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿದೆ. ಭಾರತ ಸೋಲುಂಡರೂ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1ರಿಂದ ಗೆಲುವು ಸಾಧಿಸಿದೆ.

Ad Widget . Ad Widget .

ರಾಜ್ ಕೋಟ್ ನಲ್ಲಿ ಬುಧವಾರ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 7 ವಿಕೆಟ್ ಗೆ 352 ರನ್ ಪೇರಿಸಿತು.

Ad Widget . Ad Widget .

ಕಠಿಣ ಗುರಿ ಬೆಂಬತ್ತಿದ ಭಾರತ 49.4 ಓವರ್ ಗಳಲ್ಲಿ 286 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ನಾಯಕ ರೋಹಿತ್ ಶರ್ಮ 57 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್ ಸೇರಿದ 81 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 61 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 56 ರನ್ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ 43 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 48 ರನ್ ಬಾರಿಸಿದರು.

Leave a Comment

Your email address will not be published. Required fields are marked *