ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ಆಶ್ರಯದಲ್ಲಿ ಪ್ರಥಮ ಬಿಕಾಂ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಲೋಗೋ ರಂಗ್ ಪ್ರದರ್ಶನವು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು.

ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಒಟ್ಟು 34 ವಿವಿಧ ಆಪ್(app)ಗಳನ್ನು ರಂಗೋಲಿಯಲ್ಲಿ ಮೂಡಿಸಿದರು. ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ. ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿ ಪ್ರದರ್ಶನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಆಂತರಿಕ ಗುಣಮಟ್ಟ ಭರವಸಾಕೋಶದ ಸಂಚಾಲಕಿ ಪ್ರೊ.ಲತಾ ಬಿ.ಟಿ., ವಾಣಿಜ್ಯ ಮತ್ತು ಉದ್ಯಮಾಡಳಿತ ಸಂಘದ ಉಪನ್ಯಾಸಕ ಪ್ರತಿನಿಧಿ ಪ್ರೊ.ಅಶ್ವಿನಿ, ಕಾರ್ಯಕ್ರಮದ ಸಂಯೋಜಕ ಪ್ರೊ.ಶಿವಪ್ರಸಾದ್ ಎಸ್., ವಿದ್ಯಾರ್ಥಿ ನಾಯಕ ಸುಹಾಸ್ ಉಪಸ್ಥಿತರಿದ್ದರು.