ಜೆಡಿಎಸ್ ನ ಇನ್ನೊಂದು ವಿಕೆಟ್ ಪತನ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಒಂದಲ್ಲ ಒಂದು ರೀತಿಯಲ್ಲಿ ಬೆಳವಣಿಗೆ ನಡೆಯುತ್ತಲೆ ಇದೆ, ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಎಲ್ಲರಿಗೂ ಗೊತ್ತೆ ಇದೆ, ಮುಂಬರುವ ಲೋಕಸಭಾ ಚುನಾವಣೆಗೆ ಅಖಾಡಕ್ಕಿಳಿಯಲೆ ಬೇಕು. ಆದ್ರೆ, ಅದಕ್ಕೂ ಮುನ್ನ ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ‌ ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ.

Ad Widget ... ..

ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​.ಡಿ ಕುಮಾರಸ್ವಾಮಿ, ಹೆಚ್​.ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.

Ad Widget

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಇಬ್ರಾಹಿಂ ಸಹ ಜೆಡಿಎಸ್​ಗೆ ಗುಡ್​ಬೈ ಹೇಳುವ ಸಾಧ್ಯತೆಗಳು ಹೆಚ್ಚಿವೆ. ಯಾಕಂದ್ರೆ ಇಬ್ರಾಹಿಂ ಬಿಜೆಪಿಯ ಸಿದ್ಧಾಂತಗಳನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದವರು. ಇದೀಗ ಜೆಡಿಎಸ್​ ಬಿಜೆಪಿಯೊಂದಿಗೆ ಮೈತ್ರಿ ಮಾಡಿಜೊಂಡಿದೆ. ಇದರಿಂದ ಅವರು ಪಕ್ಷ ತೊರೆದರೂ ತೆರೆಯಬಹುದು.

Leave a Comment

Your email address will not be published. Required fields are marked *