Ad Widget .

ವಿದ್ಯುತ್ ತಗುಲಿ ಒದ್ದಾಡುತ್ತಿದ್ದ ಬಾಲಕನನ್ನು ರಕ್ಷಿಸಿದ ವೃದ್ಧರು

ಸಮಗ್ರ ನ್ಯೂಸ್: ವಾರಾಣಾಸಿಯ ಬನಾರಸ್ ನಗರದಲ್ಲಿ ನಿನ್ನೆ ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಸ್ಥಳದಲ್ಲಿ ಚರಂಡಿಗಳೂ ತುಂಬಿ ಹರಿಯುತ್ತಿವೆ. ಈ ಚರಂಡಿಗಳು ತುಂಬಿ ಹರಿಯುತ್ತಿದ್ದರಿಂದ 4 ವರ್ಷದ ಮಗುವೊಂದು ವಿದ್ಯುತ್ ಸ್ಪರ್ಶಿಸಿದ್ದು, ವೃದ್ಧರೊಬ್ಬರು ಬಾಲಕನನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ
ವಾರಾಣಸಿಯಲ್ಲಿ ವಿದ್ಯುತ್ ತಗುಲಿ ಒದ್ದಾಡುತ್ತಿದ್ದ ಬಾಲಕನ್ನನ್ನು ವೃದ್ಧರು ರಕ್ಷಿಸಿದ್ದಾರೆ.

Ad Widget . Ad Widget .

ಚೆಟ್‌ಗಂಜ್ ಪೊಲೀಸ್ ಠಾಣೆಯ ಹಬೀಬ್‌ಪುರ ಪ್ರದೇಶದ ಜಂಜಿರಾ ಶಾ ಬಾಬಾ ಸಮಾಧಿ ಬಳಿ ಈ ಘಟನೆ ನಡೆದಿದೆ. ಮಗುವನ್ನು ರಕ್ಷಿಸಿದ ನಂತರ, ಅವರು ಬಾಲಕನನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಿ, ಕರೆ ಮಾಡಿ ವಿದ್ಯುತ್ ಸರಬರಾಜನ್ನು ನಿಲ್ಲಿಸಿದ್ದಾರೆ.

Ad Widget . Ad Widget .

ಮಗುವಿಗೆ ವಿದ್ಯುತ್ ಸ್ಪರ್ಶವಾಗಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸ್ ಠಾಣೆ ಪ್ರಭಾರಿ ಚೇಟ್‌ಗಂಜ್ ತಿಳಿಸಿದ್ದಾರೆತಿಳಿಸಿದ್ದಾರೆ.
ಸ್ಥಳೀಯ ಹಿರಿಯರು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಾಲ್ಕು ವರ್ಷದ ಕಾರ್ತಿಕ್ ಮಳೆ ನಿಂತ ನಂತರ ನೀರಿನಲ್ಲಿ ಆಟವಾಡುತ್ತಿದ್ದ. ಮನೆಯ ಸಮೀಪದಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ನೀರಿನ ಮೂಲಕ ಪ್ರವಹಿಸಿತ್ತು. ಕಾರ್ತಿಕ್​ಗೆ ವಿದ್ಯುತ್ ತಗುಲಿದ ನಂತರ ಕಿರುಚುತ್ತಾ ಗೋಳಾಡುತ್ತಿದ್ದ ಅಷ್ಟರಲ್ಲಿ ಆ ದಾರಿಯಲ್ಲಿ ಹೋಗುತ್ತಿದ್ದ ಇಬ್ಬರು ಹಿರಿಯರಲ್ಲಿ ಒಬ್ಬರು ನೆಲದ ಮೇಲೆ ಬಿದ್ದು ಅಳುತ್ತಿದ್ದ ಬಾಲಕನನ್ನು ಎತ್ತಿಕೊಳ್ಳಲು ಪ್ರಯತ್ನಿಸಿದ್ದಾರೆ ಆಗ ಅವರಿಗೆ ವಿದ್ಯುತ್ ತಗುಲಿದೆ. ಬಳಿಕ ಮರದ ಕೋಲಿನ ಸಹಾಯದಿಂದ ಬಾಲಕನನ್ನು ಕಾಪಾಡಿದ್ದಾರೆ.
ಈ ಸಂಪೂರ್ಣ ಘಟನೆಯು ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ, ಈ ಹಿರಿಯರ ಕಾರ್ಯವನ್ನು ಎಲ್ಲರೂ ಶ್ಲಾಘಿಸುತ್ತಿದ್ದಾರೆ.

Leave a Comment

Your email address will not be published. Required fields are marked *