Ad Widget .

ಉಳ್ಳಾಲ: ಗೂಡ್ಸ್ ಆಟೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಗೂಡ್ಸ್ ರಿಕ್ಷಾ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ನಡೆದಿದೆ.

Ad Widget . Ad Widget .

ಮೃತರನ್ನು ತೊಕ್ಕೊಟ್ಟು ಕೃಷ್ಣ ನಗರದ ಲಚ್ಚಿಲ್ ನಿವಾಸಿ ನಾಗೇಶ್ (62) ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಿಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಗಣೇಶ್ ಭವನ ಮಾಲಕರ ಮನೆಯಂಗಳದಲ್ಲೇ ನಿಲ್ಲಿಸಲಾಗಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು, ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ.

Ad Widget . Ad Widget .

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಂದ ಬಾವಿಯಲ್ಲಿ ನಾಗೇಶ್ ದೇಹವಿರುವುದು ಖಾತ್ರಿಯಾಗಿದ್ದು, ಮೃತ ದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Leave a Comment

Your email address will not be published. Required fields are marked *