ಕಡಬ: ವ್ಯಕ್ತಿ ಮೇಲೆ ಕಾಡಾನೆ ದಾಳಿ| ಗಂಭೀರವಾಗಿ ಗಾಯಗೊಂಡಾತ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರ (ಸೆ.28) ದಂದು ರಾತ್ರಿ ಸಂಭವಿಸಿದೆ.

Ad Widget ... ..

ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Ad Widget

Leave a Comment

Your email address will not be published. Required fields are marked *