Ad Widget .

ಮೂಡಿಗೆರೆ:ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ|ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕಲ್ಲಕ್ಕಿ ಎಸ್ಟೇಟ್ ನಲ್ಲಿ .

Ad Widget . Ad Widget .

ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ಏಕಾ ಏಕಿ ದಾಳಿ ನಡೆಸಿದ್ದು ಕಾರ್ಮಿಕರು ಭಯಭಿತರಾಗಿ ದಿಕ್ಕಾಪಾಲಗಿ ಓಡಿದ್ದಾರೆ. ಈ ವೇಳೆ 5ಜನರ ಮೇಲೆ ದಾಳಿ ನಡೆಸಿದ್ದು, ವಿನೋದ, ಪುಷ್ಪ, ಪ್ರೇಮ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ತೋಟಗಳಲ್ಲಿ ಜೇನುಗಳು ಗೂಡು ಕಟ್ಟಿಕೊಂಡಿದ್ದು, ರಸ್ತೆಯಲ್ಲಿ ಓಡಾಡುವವರ ಮೇಲೆ ಹಾಗೂ ಕೂಲಿ ಕೆಲಸ ಮಾಡುವವರ ಮೇಲೆ ದಾಳಿ ಮಾಡುತ್ತಿವೆ. ಇದರಿಂದಾಗಿ ಯುವಕರು, ಯುವತಿಯರು ಸೇರಿದಂತೆ ಗ್ರಾಮದ ಹಲವರು ಜೇನು ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಉದಾಹರಣೆ ಸಾಕಷ್ಟು ನಡೆದಿವೆ. ಜೇನು ಹುಳುಗಳ ಹಠಾತ್ ದಾಳಿಗೆ ಆತಂಕಗೊಂಡಿರುವ ಗ್ರಾಮಸ್ಥರು ದಾಳಿ ನಡೆದ ರಸ್ತೆಯಲ್ಲಿ ಓಡಾಡುವುದಕ್ಕೆ ಭಯಪಡುವಂತಾಗಿದೆ.

Leave a Comment

Your email address will not be published. Required fields are marked *