ಆಕಸ್ಮಿಕ ಬೆಂಕಿಗೆ ಮನೆ ಗೋಡೆ ಬಿದ್ದು 6 ಜನರಿಗೆ ಗಂಭೀರ

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಸ್ಫೋಟಗೊಂಡು ಮನೆ ಗೋಡೆ ಕುಸಿದು ಆರು ಜನರಿಗೆ ಗಂಭೀರ ಗಾಯವಾದ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ನಡೆದಿದೆ.

Ad Widget ... ..

ಮಧುಗಿರಿ ರಸ್ತೆಯ ಪಾರ್ಕ್ ಮೊಹಲ್ಲಾದ ನಜೀರ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಕೂಡಲೇ ಗಾಯವಾದವರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಫೋಟದಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಸ್ಫೋಟಕ್ಕೆ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

Ad Widget

ಸ್ಥಳಕ್ಕೆ ತುಮಕೂರು ಎಸ್ಪಿ ಕೆ.ವಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ. ಶಾಸಕ ಟಿ.ಬಿ ಜಯಚಂದ್ರ ಭೇಟಿ ನೀಡಿದ್ದಾರೆ. ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *