ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದ್ದು, ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದರ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆಯನ್ನು ಕರೆದಿತ್ತು.
ಈ ಸಭೆಯಲ್ಲಿ CWRC ಆದೇಶ ಪಾಲಿಸುವಂತೆ CWMA ಕರ್ನಾಟಕ್ಕೆ ಸೂಚನೆ ನೀಡಿದೆ.ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.
ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್ನ ಅಂತಿಮ ತೀರ್ಪಿನ ಆಧಾರದ ಮೇಲೆ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕು ಎನ್ನುವ ಒತ್ತಾಯ ತಮಿಳುನಾಡು ಹೇರಿದೆ. ಇತ್ತ ಕರ್ನಾಟಕದಲ್ಲಿ ಕುಡಿಯಲು ನೀರಿಲ್ಲ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಪ್ರತಿಭಟನೆಗಳು ನಡೆಯುತ್ತಿದೆ. ಈ ಹಿನ್ನೆಲೆ ಸೆ.29 ರಂದು ಇಂದು ಕರ್ನಾಟಕ ಬಂದ್ ಗೆ ಕೂಡ ಕರೆ ನೀಡಲಾಗಿತ್ತು.