ರೈಲ್ವೆ ಹಳಿಯಲ್ಲಿ ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಯುವಕ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲು ರೀಲ್ಸ್ ಮಾಡಲು ಹೋಗಿ ಯವಕನೊಬ್ಬ ಜೀವ ಕಳೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Ad Widget ... ..

ಮೃತ ಬಾಲಕನನ್ನು ಉತ್ತರ ಪ್ರದೇಶದ ಜಹಾಂಗೀರಾಬಾದ್‌ನ ತೇರಾ ದೌಲತ್‌ಪುರ ನಿವಾಸಿ ಮಗ ಫರ್ಮಾನ್‌(14) ಎಂದು ಗುರುತಿಸಲಾಗಿದೆ. ರೀಲ್ಸ್ ಮಾಡಲು ಫರ್ಮಾನ್ ರೈಲು ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ರೈಲೊಂದು ಫರ್ಮಾನ್ ಗೆ ಡಿಕ್ಕಿ ಹೊಡೆದಿದೆ.

Ad Widget

ಡಿಕ್ಕಿಯಾದ ರಭಸಕ್ಕೆ ಫರ್ಮಾನ್ ಸ್ಥಳದಲ್ಲೇ ಸಾವನಪ್ಪಿದ್ದು, ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಣದಲ್ಲಿ ವೈರಲ್ ಆಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Leave a Comment

Your email address will not be published. Required fields are marked *