Ad Widget .

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..!

ಸಮಗ್ರ ನ್ಯೂಸ್: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗಳು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ

Ad Widget . Ad Widget .

2017 ರಂದು ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ದಂಪತಿಗಳಿಗೆ 2021 ರ ಜನವರಿಯಲ್ಲಿ ಹೆಣ್ಣು ಮಗು ಜನಿಸಿತ್ತು. ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯಾಗಿದೆ. ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಜೊತೆಗೆ ವಿರಾಟ್ ಕೊಹ್ಲಿ ಅವರೊಂದಿಗೆ ಎಲ್ಲಿಗೂ ಪ್ರಯಾಣಿಸುತ್ತಿಲ್ಲ ಹಾಗೂ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುತ್ತಿಲ್ಲ ಎಂದು ವರದಿಯಾಗಿದೆ.

Ad Widget . Ad Widget .

ಇನ್ನೊಂದು ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಇತ್ತೀಚೆಗೆ ಮುಂಬೈನ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ವಿನಂತಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಈ ವಿಚಾರವನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

Leave a Comment

Your email address will not be published. Required fields are marked *