Ad Widget .

ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲು ಮುಂದಾದ ಮಾಜಿ ಶಾಸಕ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್​ ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಎರಡೂ ಪಕ್ಷದಲ್ಲೂ ಒಂದಿಷ್ಟು ಡ್ಯಾಮೇಜ್​ ಆಗುತ್ತಿದೆ. ಇನ್ನು ವಿಧಾನಸಭೆ ಚುನಾವಣೆ ಸಮಯದಲ್ಲಿ ಹಲವು ಬಿಜೆಪಿ ನಾಯಕರಿಗೆ ಟಿಕೆಟ್​ ಕೈ ತಪ್ಪಿದ್ದರಿಂದ ಕೆಲವು ನಾಯಕರು ಮುನಿಸಿಕೊಂಡಿದ್ದಾರೆ. ಈ ಎರಡೂ ಕಾರಣದಿಂದ ಎರಡೂ ಪಕ್ಷದ ಹಲವು ನಾಯಕರು ಕಾಂಗ್ರೆಸ್​ನತ್ತ ಮುಖಮಾಡಿದ್ದಾರೆ. ಅದರಂತೆ ಇದೀಗ ಬಿಜೆಪಿ ಮಾಜಿ ಶಾಸಕ ಪಕ್ಷ ತೊರೆಯಲು ಸಿದ್ದರಾಗಿದ್ದಾರೆ.

Ad Widget . Ad Widget .

ಶಿರಹಟ್ಟಿಯಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ರಾಮಣ್ಣ ಲಮಾಣಿ ಬಿಜೆಪಿಗೆ ಗುಡ್​ಬೈ ಹೇಳಿ ಅ.10ರಂದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಶಿರಹಟ್ಟಿ ತಾಲೂಕಿನ ಕುಂದ್ರಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದೇನೆ. ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತು ನಾನು ಕಾಂಗ್ರೆಸ್​ಗೆ ಸೇರುತ್ತೇವೆ. ಇದೇ ವೇಳೆ ಬಿಜೆಪಿಯ ಹಲವು ಮಾಜಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಬಿಜೆಪಿಯಲ್ಲಿ ಎರಡು ಭಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತವರೆಗೂ ಎಲ್ಲಾ ಕಡೆ ಕಾರ್ಯಕ್ರಮಕ್ಕೆ ಖರ್ಚುವೆಚ್ಚ ಮಾಡಿದ್ದೇನೆ. ಆದರೆ ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲ್ಲಿಲ್ಲ. ಆದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದಿದ್ದೇನೆ ಎಂದಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *