ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು ಕರ್ನಾಟಕಕ್ಕೆ ಸತತ ಶಾಕ್ ನೀಡುತ್ತಿದ್ದು, ಆಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶ ನೀಡಿದೆ. ಇದಕ್ಕೆ ಕರ್ನಾಟಕ ಸರ್ಕಾರವು ಪ್ರತಿರೋಧ ವ್ಯಕ್ತಪಡಿಸಿದ್ದು ಇಂದು ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಸುಪ್ರೀಂಕೋರ್ಟ್ ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಿದೆ.
ಜಲಾಶಯದಲ್ಲಿ ನೀರಿನ ಸಮಸ್ಯೆ ಇದೆ. ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆಸಿದ ಸಂಘಟನೆಗಳಿಗೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಧನ್ಯವಾದ ಹೇಳಿದ್ದಾರೆ.