September 2023

ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧೆ ಇಲ್ಲ

ಸಮರ್ಗ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. “ಲೋಕಸಭಾ ಚುನಾವಣೆಯಲ್ಲಿ ನಾನು ಕೇವಲ‌ ಕಾರ್ಯಕರ್ತನಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ” ಎಂದು ಬೀದರ್ ನಲ್ಲಿ ಹೇಳಿದ್ದಾರೆ. ಲೋಕಸಭಾ ಚುನಾವಣಾ ಟಿಕೆಟ್ ಕುರಿತಂತೆ ದೇವೇಗೌಡರ ಕುಟುಂಬದಲ್ಲಿ ಈಗಾಗಲೇ ಹಲವಾರು ಪ್ರಶ್ನೆಗಳು ಎದ್ದಿದ್ದು, ನಿಖಿಲ್ ಕುಮಾರಸ್ವಾಮಿ ಹೇಳಿಕೆ ಒಂದಿಷ್ಟು ಸಮಾಧಾನ ತಂದಿರುವುದು ಖಚಿತ.

ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧೆ ಇಲ್ಲ Read More »

ಕೊಡಗು: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ

ಸಮಗ್ರ ನ್ಯೂಸ್: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿರಾಜಪೇಟೆಯ ಮಾಕುಟ್ಟ ಚೆಕ್ ಪೋಸ್ಟ್ ನಿಂದ 5 ಕಿ. ಮೀ. ದೂರದ ಅರಣ್ಯದಂಚಿನಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಅರಣ್ಯ ಸಿಬ್ಬಂದಿಗಸ್ತು ತಿರುಗುವ ಸಮಯದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕೊಡಗು ಎಸ್ ಪಿ ರಾಮರಾಜನ್ ಭೇಟಿನೀಡಿ ತನಿಖೆ ಮುಂದುವರೆದಿದೆ.

ಕೊಡಗು: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ Read More »

ಕಾವೇರಿ ನದಿ ನೀರು ಹಂಚಿಕೆ/ ಕರ್ನಾಟಕಕ್ಕೆ ಮತ್ತೆ ಶಾಕ್

ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯ ಸಭೆಯಲ್ಲಿ ಮತ್ತೊಮ್ಮೆ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದ್ದು, ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಸಮಿತಿ ಆದೇಶ ನೀಡಿದೆ. ಸೆಪ್ಟೆಂಬರ್ 15ರಂದು ನಡೆದ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಮಿತಿ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿದ್ದ, ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ನೀರಿನ

ಕಾವೇರಿ ನದಿ ನೀರು ಹಂಚಿಕೆ/ ಕರ್ನಾಟಕಕ್ಕೆ ಮತ್ತೆ ಶಾಕ್ Read More »

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಗಳಲ್ಲಿನ ಅಪಾಯದ ನಿರಾಸಕ್ತಿ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳಿಂದಾಗಿ ರೂಪಾಯಿ ಮೌಲ್ಯವು ಸತತ ನಾಲ್ಕನೇ ದಿನವೂ ಯುಎಸ್ ಡಾಲರ್ ವಿರುದ್ಧ 13 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟ ₹ 83.29 ಕ್ಕೆ (ತಾತ್ಕಾಲಿಕ) ತಲುಪಿದೆ. ಇಂಟರ್ಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ದೇಶೀಯ ಘಟಕವು ಡಾಲರ್ ವಿರುದ್ಧ 83.09 ಕ್ಕೆ ಪ್ರಾರಂಭವಾಯಿತು ಮತ್ತು ಗ್ರೀನ್ಬ್ಯಾಕ್ ವಿರುದ್ಧ 83.09 ರಿಂದ 83.30 ರ ವ್ಯಾಪ್ತಿಯಲ್ಲಿ ವಹಿವಾಟು ನಡೆಸಿತು. ಅಂತಿಮವಾಗಿ ಡಾಲರ್ ಎದುರು ರೂಪಾಯಿ ದಾಖಲೆಯ

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ Read More »

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ವಜ್ರದೇಹಿ ಸ್ವಾಮೀಜಿ ಹೆಸರು|ಸ್ಪಷ್ಟನೆ ನೀಡಿದ ಸ್ವಾಮೀಜಿ

ಸಮಗ್ರ ನ್ಯೂಸ್: ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾ‌ನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಅವರು ಜುಲೈ ತಿಂಗಳಲ್ಲಿ

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ವಜ್ರದೇಹಿ ಸ್ವಾಮೀಜಿ ಹೆಸರು|ಸ್ಪಷ್ಟನೆ ನೀಡಿದ ಸ್ವಾಮೀಜಿ Read More »

ಆಸ್ಪತ್ರೆಯಿಂದ ಕೊನೆಗೂ ಬಿಡುಗಡೆಗೊಂಡ ಡೀಲ್ ರಾಣಿ ಚೈತ್ರಾ| ಆಲ್ ಈಸ್ ವೆಲ್ ಎಂದು ಡಾಕ್ಟರ್ ಹೇಳಿದ್ರೂ ಬಾಯಲ್ಲಿ ನೊರೆ ಬಂದಿದ್ದೇಕೆ?

ಸಮಗ್ರ ನ್ಯೂಸ್: ವಂಚಕಿ ಚೈತ್ರಾ ಕುಂದಾಪುರ ಕಳೆದ ಮೂರುವರೆ ದಿನಗಳಿಂದ ಅನಾರೋಗ್ಯದ ಹೆಸರಿನಲ್ಲಿ ನಡೆಸಿದ ನಾಟಕ ಇದೀಗ ಬಂದ್‌ ಆಗಿದ್ದು ಆಕೆಯ ದೇಹ ಸ್ಥಿತಿ ನಾರ್ಮಲ್‌ ಆಗಿದೆ. ಆಕೆಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ದೃಢೀಕರಿಸಿ ಆಕೆಯನ್ನು ಡಿಸ್ಚಾರ್ಜ್‌ ಮಾಡಿದ್ದಾರೆ. ಸೆ.12ರಂದು ಬಂಧಿತಳಾಗಿದ್ದ ಚೈತ್ರಾ ಕುಂದಾಪುರಳನ್ನು ಮರುದಿನ ಬೆಂಗಳೂರಿಗೆ ಕರೆತಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸೆ.15ರಂದು ಸಿಸಿಬಿ ಕಚೇರಿಗೆ ಕರೆತಂದ ಕೆಲವೇ ನಿಮಿಷದಲ್ಲಿ ಆಕೆ ವಾಷ್‌ ರೂಮ್‌ನಲ್ಲಿ ಬಾಯಿಯಲ್ಲಿ ನೊರೆಯೊಂದಿಗೆ ಬಿದ್ದುಕೊಂಡಿದ್ದಳು. ಅಲ್ಲಿಂದ ಆಕೆಯನ್ನು ವಿಕ್ಟೋರಿಯಾ

ಆಸ್ಪತ್ರೆಯಿಂದ ಕೊನೆಗೂ ಬಿಡುಗಡೆಗೊಂಡ ಡೀಲ್ ರಾಣಿ ಚೈತ್ರಾ| ಆಲ್ ಈಸ್ ವೆಲ್ ಎಂದು ಡಾಕ್ಟರ್ ಹೇಳಿದ್ರೂ ಬಾಯಲ್ಲಿ ನೊರೆ ಬಂದಿದ್ದೇಕೆ? Read More »

ಕೆಎಸ್ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್| ರಜಾದಿನದಂದು ಕರ್ತವ್ಯಕ್ಕೆ ಹಾಜರಾದವರಿಗೆ ಹೆಚ್ಚುವರಿ ವೇತನ ಪಾವತಿ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಜಾ ದಿನದಂದು ಕರ್ತವ್ಯ ನಿರ್ವಹಿಸಿದವರಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ. ಪ್ರಸ್ತುತ ಶಕ್ತಿ ಯೋಜನೆ” ಯ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದ್ದು, ವಾಹನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಜುಲೈ-2023 ರಿಂದ ಮುಂದುವರೆದಂತೆ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್-19 ಪೂರ್ವದಲ್ಲಿದ್ದಂತೆ ಹೆಚ್ಚುವರಿ

ಕೆಎಸ್ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್| ರಜಾದಿನದಂದು ಕರ್ತವ್ಯಕ್ಕೆ ಹಾಜರಾದವರಿಗೆ ಹೆಚ್ಚುವರಿ ವೇತನ ಪಾವತಿ Read More »

ಪ್ರಜ್ವಲ್‌ ರೇವಣ್ಣಗೆ ಕೊಂಚ ರಿಲೀಫ್| ಅನರ್ಹತೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅಸಿಂಧುಗಳಿಸಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್​ ರೇವಣ್ಣ ಸಂಸದ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಸಂಸದ ಸ್ಥಾನ ಅಸಿಂಧುಗಳಿಸಿದ್ದ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್‌ ಅವರು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದರು. ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ್‌, ಪರಡಿವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ಪೀಠ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಮುಂದಿನ ನಾಲ್ಕು ವಾರಗಳ ಅವಧಿಗೆ ಈ

ಪ್ರಜ್ವಲ್‌ ರೇವಣ್ಣಗೆ ಕೊಂಚ ರಿಲೀಫ್| ಅನರ್ಹತೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ Read More »

‘ಸೌಜನ್ಯಳಿಗಾದ ಗತಿಯೇ ನಿನಗೂ ಆಗುತ್ತೆ’ | ಟಿವಿ ವಿಕ್ರಮದ ಸಂಸ್ಥಾಪಕ ಮಹೇಶ್ ಹೆಗ್ಡೆ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ವ್ಯಕ್ತಿಯೋರ್ವರಿಗೆ ಬೆದರಿಕೆ ಹಾಕಿ ಮಾನಹಾನಿಕರ ಕಾಮೆಂಟ್ ಹಾಕಿದ ಆರೋಪದಡಿಯಲ್ಲಿ ʼಪೋಸ್ಟ್ ಕಾರ್ಡ್ʼ ಸಹ-ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ ಬೆಂಗಳೂರು ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರ ಸುರೇಶ್ ಬಾಬು ಮತ್ತು ಆತನ ಮಗಳ ಬಗ್ಗೆ ವಿಕ್ರಮ್ ಹೆಗಡೆ, ʼಟಿವಿ ವಿಕ್ರಮ್ʼ ಅಧಿಕೃತ ಪೇಜ್‌ನಲ್ಲಿ ಮಾನಹಾನಿಕಾರ ಕಾಮೆಂಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ದೂರುದಾರರಿಗೆ ಕರೆ ಮಾಡಿರುವ ಮಹೇಶ್ ವಿಕ್ರಮ್ ಹೆಗಡೆ, ʼʼನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈನಲ್ಲೂ ಏನೂ

‘ಸೌಜನ್ಯಳಿಗಾದ ಗತಿಯೇ ನಿನಗೂ ಆಗುತ್ತೆ’ | ಟಿವಿ ವಿಕ್ರಮದ ಸಂಸ್ಥಾಪಕ ಮಹೇಶ್ ಹೆಗ್ಡೆ ವಿರುದ್ಧ ಎಫ್ಐಆರ್ Read More »

ಸುಳ್ಯ; ಯುವಕ ನೇಣಿಗೆ ಶರಣು

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಐವರ್ನಾಡು ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಬೈಕ್ ಶೋರೂಂ ಒಂದರಲ್ಲಿ ಕೆಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಕೆಲವು ಸಮಯಗಳಿಂದ ಈತ ಐವರ್ನಾಡಿನ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ ಮಾಡುತ್ತಿದ್ದ.ಇದೀಗ ಅದೇ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಸುಳ್ಯ; ಯುವಕ ನೇಣಿಗೆ ಶರಣು Read More »