September 2023

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದ ಅಲೋಕ್ ಕುಮಾರ್ ಅವರನ್ನು ಇದೀಗ ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರಿಗೆ ಮುಂಬಡ್ತಿ ಭಾಗ್ಯ ನೀಡಿದೆ. ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ […]

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಅಧಿಕಾರಿಗಳ ವರ್ಗಾವಣೆ Read More »

ಸುಳ್ಯ: ಮಹಾತ್ಮ ಗಾಂಧೀಜಿ ಪ್ರತಿಮೆ ಸ್ಥಾಪನೆ ಮಾಡಲು ನಗರ ಪಂಚಾಯತ್ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ನ ನಗರೋತ್ಥಾನ ಯೋಜನೆಯಲ್ಲಿ ಸುಳ್ಯದ ಬೀರಮಂಗಲದಲ್ಲಿ ನಿರ್ಮಾಣವಾಗುತ್ತಿರುವ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಾಣ ಮಾಡುವಂತೆ ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಖ್ಯಧಿಕಾರಿಗೆ ಮನವಿ ನೀಡಿಲಾಯಿತು. ಸುಳ್ಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭ ಸುಳ್ಯದಲ್ಲಿ ಒಂದು ದಿನ ತಂಗಿದ್ದು, ಹಳೆಗೇಟಿನಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿರುವ ಇತಿಹಾಸ ಸುಳ್ಯಕ್ಕಿರುವುದರಿಂದ, ಮಹಾತ್ಮ ಗಾಂಧೀಜಿಯವರು ಸುಳ್ಯದಲ್ಲಿ ಓಡಾಡಿದ ಮತ್ತು ಸುಳ್ಯದವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಕಾರಣಕರ್ತರಾದ

ಸುಳ್ಯ: ಮಹಾತ್ಮ ಗಾಂಧೀಜಿ ಪ್ರತಿಮೆ ಸ್ಥಾಪನೆ ಮಾಡಲು ನಗರ ಪಂಚಾಯತ್ ಗೆ ಮನವಿ Read More »

ಆಹಾರಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡೋದನ್ನ ತಕ್ಷಣ ನಿಲ್ಲಿಸಿ| ಮಾರಾಟಗಾರರಿಗೆ FSSAI ಸೂಚನೆ

ಸಮಗ್ರ ನ್ಯೂಸ್: ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು ಪತ್ರಿಕೆಗಳನ್ನು ಬಳಸುತ್ತಿದ್ದರೆ ಇಂದೇ ಈ ಕೆಲಸವನ್ನು ನಿಲ್ಲಿಸಿ ಜಾಗರೂಕರಾಗಿರಿ. ಏಕೆಂದರೆ, ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಹಾರ ಮಾರಾಟಗಾರರು ಮತ್ತು ಗ್ರಾಹಕರಿಗೆ ಪ್ರಮುಖ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು, ಬಡಿಸಲು ಮತ್ತು ಸಂಗ್ರಹಿಸಲು ಪತ್ರಿಕೆಗಳನ್ನು ಬಳಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಕೇಳಿದೆ. FSSAI ಸಿಇಒ ಜಿ ಕಮಲಾ ವರ್ಧನ್ ರಾವ್ ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು ಪ್ಯಾಕಿಂಗ್

ಆಹಾರಗಳನ್ನು ದಿನಪತ್ರಿಕೆಗಳಲ್ಲಿ ಪ್ಯಾಕ್ ಮಾಡೋದನ್ನ ತಕ್ಷಣ ನಿಲ್ಲಿಸಿ| ಮಾರಾಟಗಾರರಿಗೆ FSSAI ಸೂಚನೆ Read More »

ಉಜಿರೆ:ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 29 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಕಾಳಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ವಹಿಸಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿಸಚಿವ ಗಂಗಾಧರ

ಉಜಿರೆ:ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ Read More »

ವಾಟ್ಸ್ಯಾಪ್ ನಿಂದ ಮತ್ತೊಂದು ಹೊಸ ಪೀಚರ್| ನಿಮ್ಮ ಸ್ಟೇಟಸ್ ನಿಮ್ಗೆ 24 ಗಂಟೆಗೂ ಮೀರಿ ಇಟ್ಕೋಬಹುದು

ಸಮಗ್ರ ನ್ಯೂಸ್: 2 ಬಿಲಿಯನ್ ಜಾಗತಿಕ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ ಆ್ಯಪ್ ದಿನಕ್ಕೊಂದು ನೂತನ ಫೀಚರ್​ಗಳನ್ನು ಘೋಷಿಸುತ್ತಿದೆ. ನೂತನ ಅಪ್ಡೇಟ್​ಗಳನ್ನು ನೀಡಿ ಬಳಕೆದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿರುವ ವಾಟ್ಸ್​ಆಯಪ್ ಇದೀಗ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾಗಿದೆ. ವಾಟ್ಸ್​ಆಯಪ್​ನಲ್ಲಿ ಪ್ರಸ್ತುತ ಬಳಕೆದಾರರು ತಮ್ಮ ಸ್ಟೇಟಸ್ ಅನ್ನು 24 ಗಂಟೆಗಳವರೆಗೆ ಇರುವ ರೀತಿಯಲ್ಲಿ ಪೋಸ್ಟ್ ಮಾಡಬಹುದು. ಆದರೆ ಇತ್ತೀಚಿನ ವರದಿಯ ಪ್ರಕಾರ ಈ 24 ಗಂಟೆಗಳ ಅವಧಿಯನ್ನು ವಾಟ್ಸ್​ಆಯಪ್​ ವಿಸ್ತರಿಸಲಿದೆಯಂತೆ. ವಾಟ್ಸ್​ಆಯಪ್ ಅಪ್‌ಡೇಟ್‌ಗಳ ಬಗ್ಗೆ

ವಾಟ್ಸ್ಯಾಪ್ ನಿಂದ ಮತ್ತೊಂದು ಹೊಸ ಪೀಚರ್| ನಿಮ್ಮ ಸ್ಟೇಟಸ್ ನಿಮ್ಗೆ 24 ಗಂಟೆಗೂ ಮೀರಿ ಇಟ್ಕೋಬಹುದು Read More »

ಕರಾವಳಿ ಜಿಲ್ಲೆಗಳಲ್ಲಿ ಸೆ. 30ರಿಂದ ಮೂರು ದಿನಗಳ ಕಾಲ ಭಾರಿ ಮಳೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,

ಕರಾವಳಿ ಜಿಲ್ಲೆಗಳಲ್ಲಿ ಸೆ. 30ರಿಂದ ಮೂರು ದಿನಗಳ ಕಾಲ ಭಾರಿ ಮಳೆ Read More »

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ

ಸಮಗ್ರ ನ್ಯೂಸ್: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರನ್ನು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಗೌರವಿಸಲಾಯಿತು. ಕಾವೇರಿ ನಿಸರ್ಗಧಾಮದಲ್ಲಿ ನಡೆದ “ಸಿರಿ ಸಂಭ್ರಮ” ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅವರು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಜಯ ವಿಷ್ಣು ಭಟ್, ಉಷಾ, ಸಂತೋಷ ಕುಡೆಕಲ್ಲು, ರಂಗಸ್ವಾಮಿ, ಉರ

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ Read More »

ಆಕಸ್ಮಿಕ ಬೆಂಕಿಗೆ ಮನೆ ಗೋಡೆ ಬಿದ್ದು 6 ಜನರಿಗೆ ಗಂಭೀರ

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಸ್ಫೋಟಗೊಂಡು ಮನೆ ಗೋಡೆ ಕುಸಿದು ಆರು ಜನರಿಗೆ ಗಂಭೀರ ಗಾಯವಾದ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ನಡೆದಿದೆ. ಮಧುಗಿರಿ ರಸ್ತೆಯ ಪಾರ್ಕ್ ಮೊಹಲ್ಲಾದ ನಜೀರ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಕೂಡಲೇ ಗಾಯವಾದವರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಫೋಟದಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಸ್ಫೋಟಕ್ಕೆ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಕೆ.ವಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ತನಿಖೆ

ಆಕಸ್ಮಿಕ ಬೆಂಕಿಗೆ ಮನೆ ಗೋಡೆ ಬಿದ್ದು 6 ಜನರಿಗೆ ಗಂಭೀರ Read More »

ಪುತ್ತೂರು: ಮನೆಮಂದಿಯನ್ನು‌ ಕಟ್ಟಿಹಾಕಿ ದರೋಡೆಗೈದ ಪ್ರಕರಣ| 6 ಮಂದಿ ಅರೆಸ್ಟ್

ಸಮಗ್ರ ನ್ಯೂಸ್: ಪುತ್ತೂರು ತಾಲೂಕು ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್ ,ವಸಂತ ,ಫಸಲ್, ನಿಝಾರ್ ಎಂದು ಗುರುತಿಸಲಾಗಿದೆ. ಐವರು ದರೋಡೆಕೋರರ ತಂಡ ಸೆಪ್ಟೆಂಬರ್ 6ರಂದು ತಡರಾತ್ರಿ ಗುರುಪ್ರಸಾದ್ ರೈಯವರ ಮನೆಯ ಹಿಂಬದಿ ಬಾಗಿಲು ಮುರಿದು ಒಳನುಗ್ಗಿ ದರೋಡೆ ಮಾಡಿತ್ತು.ಗುರುಪ್ರಸಾದ್ ರೈ

ಪುತ್ತೂರು: ಮನೆಮಂದಿಯನ್ನು‌ ಕಟ್ಟಿಹಾಕಿ ದರೋಡೆಗೈದ ಪ್ರಕರಣ| 6 ಮಂದಿ ಅರೆಸ್ಟ್ Read More »

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ 7547 ಕಾನ್ಸ್​ಟೇಬಲ್ (Exicutive) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬರಮಾಡಿಕೊಳ್ಳುತ್ತಿದೆ. ಅರ್ಹ ಹಾಗೂ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್ ​(SSC) ನ ವೆಬ್​ಸೈಟ್​ನಲ್ಲಿ ನೋಡಬೇಕು. ಆಸಕ್ತರು ಸೆಪ್ಟೆಂಬರ್ 30, 2023 ಅಂದರೆ ನಾಳೆಯೊಳಗೆ ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿssc.nic.inಗೆ ಭೇಟಿ ನೀಡಬಹುದು. ಇದರ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ,

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್ Read More »