September 2023

ಸುಳ್ಯ:ನವೋದಯ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ

ಸಮಗ್ರ ನ್ಯೂಸ್: ಸೆ 8ರಂದು ಸುಳ್ಯದ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸುಳ್ಯ ತಾಲೂಕು ನವೋದಯ ಸ್ವ-ಸಹಾಯ ಸಂಘಗಳ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ಪರಿಶೀಲನಾ ಸಭೆಯನ್ನು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್, ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ನಡೆಸಿ ನವೋದಯ ಗುಂಪುಗಳ ಗುಣಮಟ್ಟ ಕಾಯ್ದುಕೊಂಡು ಗುಂಪುಗಳನ್ನು ಪರಿಣಾಮಕಾರಿಯಾಗಿ ಪ್ರೇರಕರು ಉತ್ತಮ ಸೇವೆಯ ಮೂಲಕ ನಿರ್ವಹಣೆ ಮಾಡುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನ ಸ್ವ-ಸಹಾಯ ಸಂಘಗಳ […]

ಸುಳ್ಯ:ನವೋದಯ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ Read More »

ಓಡಿ ಓಡಿ ಉಮ್ಲಿಂಗ್ಲಾ ತಲುಪಿದ ಸಬಿತಾ| 19 ದಿನಗಳಲ್ಲಿ ಹೊಸತೊಂದು ದಾಖಲೆ ಬರೆದ ಮಹಿಳೆ

ಸಮಗ್ರ ನ್ಯೂಸ್: ವಾಹನ ಚಲಿಸ ಬಲ್ಲ ಹಾಗೂ ಸಮುದ್ರ ಮಟ್ಟದಿಂದ ಅತ್ಯಂತ ಎತ್ತರದಲ್ಲಿರುವ ರಸ್ತೆ ಎಂದರೆ ಅದು ಉಮ್ಲಿಂಗ್ ಲಾ. 19 ದಿನಗಳ ಕಾಲ ಓಡಿಯೇ ಈ ಸ್ಥಳವನ್ನು ಬಿಹಾರದ ಒಬ್ಬ ಮಹಿಳೆ ತಲುಪಿದ್ದಾರೆ. ಈ ಮೂಲಕ ವಿಶ್ವದ ವಿಶ್ವದ ಅತಿ ಎತ್ತರದ ರಸ್ತೆಯಲ್ಲಿ ಓಡಿದ ವಿಶ್ವದ ಮೊದಲ ಮಹಿಳೆ ಎಂಬ ಖ್ಯಾತಿಗೆ ಸಬಿತಾ ಮಹತೋ ಭಾಜನರಾಗಿದ್ದಾರೆ. ಪರ್ವತಾರೋಹಿ, ಸೈಕ್ಲಿಸ್ಟ್ ಮತ್ತು ಅಲ್ಟ್ರಾ ರನ್ನರ್ ಸಬಿತಾ ಮಹತೋ ಸಪ್ಟೆಂಬರ್​ 5 ರಂದು ಉಮ್ಲಿಂಗ್ ಲಾ ತಲುಪಿ ಈ

ಓಡಿ ಓಡಿ ಉಮ್ಲಿಂಗ್ಲಾ ತಲುಪಿದ ಸಬಿತಾ| 19 ದಿನಗಳಲ್ಲಿ ಹೊಸತೊಂದು ದಾಖಲೆ ಬರೆದ ಮಹಿಳೆ Read More »

ಚಿಕ್ಕಮಗಳೂರು : ಎತ್ತಿನಗಾಡಿ ನೊಗ ಬಡಿದು ಯುವಕ ಸಾವು

ಸಮಗ್ರ ನ್ಯೂಸ್: ಎತ್ತಿನ‌ ಗಾಡಿ ಸ್ಪರ್ಧೆಯಲ್ಲಿ ವೇಗವಾಗಿದ್ದ ಎತ್ತಿನ ಗಾಡಿಯ ನೊಗ ತಲೆಗೆ ಹೊಡೆದು ಯುವಕ ಸಾವಿಗೀಡಾದ ಘಟನೆ ಸೆ. 9ರಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಭರತ್ (25) ಮೃತರಾಗಿದ್ದು. ಇವರು ಫೈನಲ್ ಸುತ್ತಿನ ಅಂತಿಮ ಸ್ಪರ್ಧೆಯಲ್ಲಿ ನೊಗ ಹಿಡಿಯಲು ಹೋಗಿದ್ದರು. ಈ ವೇಳೆ ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಈ ದುರ್ಘಟನೆ ನಡೆದಿದೆ.

ಚಿಕ್ಕಮಗಳೂರು : ಎತ್ತಿನಗಾಡಿ ನೊಗ ಬಡಿದು ಯುವಕ ಸಾವು Read More »

ತಾಂತ್ರಿಕ ಅಡಚಣೆ; ಕೇಂದ್ರ ಸರ್ಕಾರದ ‘ಮಾತೃವಂದನಾ’ ಯೋಜನೆ ಸ್ಥಗಿತ

ಸಮಗ್ರ ನ್ಯೂಸ್: ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆಗಾಗಿ ನೀಡಲಾಗುತ್ತಿದ್ದ ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆ ತಾಂತ್ರಿಕ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದೆ. ಮಾತೃವಂದನಾ ಯೋಜನೆ ಸಾಫ್ಟ್ ವೇರ್ ಅನ್ನು ಮಿಷನ್ ಶಕ್ತಿ 2.O ಸಾಫ್ಟ್ ವೇರ್ ಜೊತೆಗೆ ಜೋಡಿಸಲಾಗಿದ್ದು, ನೂತನ ತಂತ್ರಾಂಶದಲ್ಲಿ ಹಳೆಯ ಡೇಟಾಗಳು ಲಭ್ಯವಾಗುತ್ತಿಲ್ಲ. ಈ ತಾಂತ್ರಿಕ ಸಮಸ್ಯೆಯಿಂದ ಯೋಜನೆ ಹಣ ಫಲಾನುಭವಿಗಳಿಗೆ ಲಭ್ಯವಾಗುತ್ತಿಲ್ಲ ಎಂದು ತಿಳದುಬಂದಿದೆ. ಈ ಯೋಜನೆಯಡಿ, ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ನವಜಾತ ಶಿಶುಗಳ

ತಾಂತ್ರಿಕ ಅಡಚಣೆ; ಕೇಂದ್ರ ಸರ್ಕಾರದ ‘ಮಾತೃವಂದನಾ’ ಯೋಜನೆ ಸ್ಥಗಿತ Read More »

ಉಳ್ಳಾಲ: ಸರಣಿ ಅಪಘಾತ| ಮೂರು ವಾಹನಗಳು ಜಖಂ

ಸಮಗ್ರ ನ್ಯೂಸ್: ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಸರಣಿ ಅಪಘಾತವಾದ ಸಂಭವಿಸಿದ ಘಟನೆ ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ನಡೆದಿದೆ. ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಹಠಾತ್ ಬ್ರೇಕ್ ಹಾಕಿದ ಕಾರಿಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಮುಂದೆ ಇದ್ದ ಮಿನಿ ಲಾರಿ ನಡುವೆ ಕಾರು ಅಪ್ಪಚ್ಚಿಯಾಗಿದೆ. ಇನ್ನು ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಕಾರಿನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಲಾರಿ ಹಾಗೂ ಬಸ್

ಉಳ್ಳಾಲ: ಸರಣಿ ಅಪಘಾತ| ಮೂರು ವಾಹನಗಳು ಜಖಂ Read More »

ಸಾವು ಎಲ್ಲದಕ್ಕೂ ಪರಿಹಾರವಲ್ಲ|ಆತ್ಮಹತ್ಯಾ ತಡೆದಿನ ಸೆಪ್ಟಂಬರ್–10

ಸಮಗ್ರ ನ್ಯೂಸ್: ಪ್ರತಿ ವರ್ಷ ಸೆಪ್ಟಂಬರ್ 10ರಂದು ವಿಶ್ವ ಆತ್ಮಹತ್ಯಾ ತಡೆದಿನ ಎಂದು ಆಚರಿಸಿ, ಯುವಜನರಲ್ಲಿ ಆತ್ಮಹತ್ಯೆಯನ್ನು ಮಾಡದಿರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶ್ವದಲ್ಲಿ ಪ್ರತಿ 60 ಸೆಂಕೆಂಡ್‍ಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ವರ್ಷವೊಂದರಲ್ಲಿ ಏನಿಲ್ಲವೆಂದರೂ 10ರಿಂದ 12 ಲಕ್ಷ ಮಂದಿ ಆತ್ಮಹತ್ಯೆ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಬದುಕಿನಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ನಷ್ಟ, ವಿದ್ಯಾಭ್ಯಾಸದಲ್ಲಿ ಅನುತೀರ್ಣ, ಕೆಲಸದಲ್ಲಿ ಒತ್ತಡ ಹೀಗೆ ಹತ್ತು ಹಲವು ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳುತ್ತಾರೆ. 15-20 ವರ್ಷದೊಳಗಿನವರಲ್ಲಿ ಸಾವಿಗೆ ಎರಡನೇ ಅತೀ ದೊಡ್ಡ ಕಾರಣ

ಸಾವು ಎಲ್ಲದಕ್ಕೂ ಪರಿಹಾರವಲ್ಲ|ಆತ್ಮಹತ್ಯಾ ತಡೆದಿನ ಸೆಪ್ಟಂಬರ್–10 Read More »

ಎರಡು ಸಾವಿರ ತಲುಪಿದ ಸಾವಿನ ಸಂಖ್ಯೆ| ಕಂಡು ಕೇಳರಿಯದ ಭೂಕಂಪಕ್ಕೆ ಸಾಕ್ಷಿಯಾದ ಮೊರಾಕೋ

ಸಮಗ್ರ ನ್ಯೂಸ್: ಮೊರಾಕೊದಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 11:11 ಗಂಟೆಗೆ (2211 GMT) ಪ್ರವಾಸಿ ಹಾಟ್‌ಸ್ಪಾಟ್‌ನ ನೈರುತ್ಯಕ್ಕೆ 72 ಕಿ.ಮೀ (45 ಮೈಲಿ) ಪರ್ವತ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್‌ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ. ಪ್ರಬಲ ಭೂಕಂಪಕ್ಕೆ 2,012 ಜನರು ಸಾವನ್ನಪ್ಪಿದ್ದು, 2,059 ಮಂದಿ ಗಾಯಗೊಂಡಿದ್ದಾರೆ, ಇದರಲ್ಲಿ 1,404 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸಚಿವಾಲಯದ

ಎರಡು ಸಾವಿರ ತಲುಪಿದ ಸಾವಿನ ಸಂಖ್ಯೆ| ಕಂಡು ಕೇಳರಿಯದ ಭೂಕಂಪಕ್ಕೆ ಸಾಕ್ಷಿಯಾದ ಮೊರಾಕೋ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ಭವಿಷ್ಯವನ್ನು ಹೇಳಲಾಗುವುದು. ಅದರಂತೆ ಸೆಪ್ಟೆಂಬರ್ 9-16ರವರೆಗಿನ ಭವಿಷ್ಯ ನೀಡಲಾಗಿದೆ. ಈ ವಾರ 5 ರಾಶಿಯವರಿಗೆ ಶುಭವಾಗಿದೆ, ಉಳಿದ ರಾಶಿಗಳು ಸ್ವಲ್ಪ ಜಾಗ್ರತೆವಹಿಸಬೇಕು. ಈ ವಾರ ನಿಮ್ಮ ರಾಶಿಗೆ ಶುಭವೇ? ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬಿದ್ಯಾತಿ ಮಾಹಿತಿಯನ್ನು ತಿಳಿದುಕೊಳ್ಳಿ. ಮೇಷ ರಾಶಿ : ಈ ವಾರದಲ್ಲಿ ನಿಮಗೆ ಮಿಶ್ರಫಲವು ಇರಲಿದೆ. ಕುಟುಂಬ ಸೌಖ್ಯವು ಶತ್ರುಗಳ ನಾಶವೂ ಮಕ್ಕಳಿಂದ ಕೀರ್ತಿಯೂ ಲಭಿಸುವುದು. ಏಕಾದಶದ ಶನಿಯು ನಿಮಗೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರಕಾರದಿಂದ ಸ್ಪರ್ಧಾತ್ಮಕ ಪರೀಕ್ಷಾ ಉಚಿತ ತರಬೇತಿ

ಸಮಗ್ರ ನ್ಯೂಸ್: ಸರಕಾರವು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ವಸತಿ ಸಹಿತ ಐಎಎಸ್, ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು,ಕೂಡಲೇ 2023-24 ನೇ ಸಾಲಿನಲ್ಲಿ ಉಚಿತವಾಗಿ ತರಬೇತಿ ಪಡೆಯಬಹುದಾಗಿದೆ. ಈ ಸದಾವಕಾಶವನ್ನು ಸದುಪಯೋಗಪಡಿಸಲು ಇಲ್ಲಿದೆ ಪೂರ್ಣ ಮಾಹಿತಿ ಇದು ೧೦ ತಿಂಗಳ ತರಬೇತಿ ಆಗಿದ್ದು, ೨೦೨೩-೨೪ನೇ ಸಾಲಿನಲ್ಲಿ ಬೆಂಗಳೂರಿನ ಕರ್ನಾಟಕ ಹಜ್‌ ಭವನದಲ್ಲಿ ನಡೆಯಲಿರುವ ಐಎಎಸ್‌, ಕೆಎಎಸ್‌ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಗೆ ಅಲ್ಪಸಂಖ್ಯಾತ ಸಮುದಾಯವಾದ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರಕಾರದಿಂದ ಸ್ಪರ್ಧಾತ್ಮಕ ಪರೀಕ್ಷಾ ಉಚಿತ ತರಬೇತಿ Read More »

ಮೊರಾಕೋ ಭೂಕಂಪ: ಏರುತ್ತಲೇ ಇದೆ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ಮೊರಾಕೊದಲ್ಲಿ ಸಂಭವಿಸಿದ ಭೂಕಂಪದ ಸಾವಿನ ಸಂಖ್ಯೆ 632 ಕ್ಕೆ ಏರಿದೆ, 329 ಜನರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯವನ್ನು ಉಲ್ಲೇಖಿಸಿ ಸರ್ಕಾರಿ ಟಿವಿ ಸ್ಟೇಷನ್ ತಿಳಿಸಿದೆ. ಮೊರೊಕ್ಕೊದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಸುಮಾರು 600 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ ಕಾರಣದಿಂದ ಕಳೆದುಹೋದ ಜೀವಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ಸಂತ್ರಸ್ತ ಕುಟುಂಬಗಳಿಗೆ ತಮ್ಮ ಸಂತಾಪವನ್ನು ತಿಳಿಸಿದರು ಮತ್ತು ಈ ದುರಂತ ಸಮಯದಲ್ಲಿ ಉತ್ತರ ಆಫ್ರಿಕಾದ ದೇಶದ ಜನರಿಗೆ

ಮೊರಾಕೋ ಭೂಕಂಪ: ಏರುತ್ತಲೇ ಇದೆ ಸಾವಿನ ಸಂಖ್ಯೆ Read More »