September 2023

ಪುಟ್ಟ ಮಗುವಿನೊಂದಿಗೆ ಬೈಕ್ ನಲ್ಲಿ ಉಮ್ಲಿಂಗ್ ಲಾ ಪ್ರವಾಸ| ದಾಖಲೆ ನಿರ್ಮಿಸಿದ ಸುಳ್ಯದ ದಂಪತಿ|

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಉದ್ಯಮಿಯೊಬ್ಬರು ಪತ್ನಿ ಮತ್ತು ತಮ್ಮ ಮೂರುವರೆ ವರ್ಷದ ಮಗನೊಂದಿಗೆ ಸುಮಾರು 19,024 ಅಡಿ ಎತ್ತರದ ಉಮ್ಲಿಂಗ್ ಲಾ ಪ್ರದೇಶವನ್ನು ಬೈಕ್‌ನಲ್ಲಿ ತಲುಪಿದ್ದು, ಇದೀಗ ಸುಳ್ಯಕ್ಕೆ ವಾಪಸಾಗುತ್ತಿದ್ದಾರೆ. ಸುಳ್ಯ ತಾಲೂಕಿನ ನಿವಾಸಿಯಾದ ಮತ್ತು ಇಲ್ಲಿನ ಹಳೆಗೇಟ್‌ ಎಂಬಲ್ಲಿರುವ ಹೋಮ್ ಗ್ಯಾಲರಿ ಮಾಲೀಕರಾದ ತೌಹೀದ್ ರೆಹ್ಮಾನ್ ಹಾಗೂ ಅವರ ಪತ್ನಿ ಜಶ್ಮಿಯಾ ಮತ್ತು ಮಗ ಜಝೀಲ್ ರೆಹ್ಮಾನ್ ಅವರು ತಮ್ಮ ಬುಲೆಟ್‌ ಬೈಕ್‌ನಲ್ಲಿ ಉಮ್ಮಿಂಗ್ ಲಾ ತಲುಪಿದ ದಂಪತಿ. ಮೌಂಟ್ ಎವರೆಸ್ಟ್ […]

ಪುಟ್ಟ ಮಗುವಿನೊಂದಿಗೆ ಬೈಕ್ ನಲ್ಲಿ ಉಮ್ಲಿಂಗ್ ಲಾ ಪ್ರವಾಸ| ದಾಖಲೆ ನಿರ್ಮಿಸಿದ ಸುಳ್ಯದ ದಂಪತಿ| Read More »

Health Tips|ಬಾಳೆಹಣ್ಣು ತಿನ್ನುವುದರಿಂದ ಆಗೋ ಪ್ರಯೋಜನಗಳೇನು ಗೊತ್ತಾ?

ಸಮಗ್ರ ನ್ಯೂಸ್: ಆರೋಗ್ಯ ಪ್ರಯೋಜನಗಳನ್ನು ಪಡೆಯಲು ನೀವು ಬಾಳೆಹಣ್ಣನ್ನು ತಿನ್ನಲೇಬೇಕು. ಇದರಲ್ಲಿ ಸ್ವಾಭಾವಿಕವಾಗಿ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳಾದ ವಿಟಮಿನ್ ಸಿ, ಮೆದುಳಿನ ಕಾರ್ಯಕ್ಕಾಗಿ ವಿಟಮಿನ್ ಬಿ 6, ಜೀರ್ಣಕಾರಿ ಆರೋಗ್ಯಕ್ಕಾಗಿ ಆಹಾರದ ಫೈಬರ್ ಮತ್ತು ರಕ್ತದೊತ್ತಡ ಮತ್ತು ಹೃದಯದ ಆರೋಗ್ಯವನ್ನು ನಿಯಂತ್ರಿಸಲು ಪೊಟ್ಯಾಸಿಯಮ್ ಹೀಗೆ ಹಲವಾರು ಆರೋಗ್ಯಕರ ಅಂಶಗಳಿವೆ. ದೇವರ ಕಾರ್ಯಗಳಿಂದ ಹಿಡಿದು ರುಚಿ, ಆರೋಗ್ಯಕ್ಕೂ ಸೈ ಎನಿಸಿಕೊಂಡಿರುವ ಒಂದು ಹಣ್ಣು ಅಂದರೆ ಅದು ಬಾಳೆಹಣ್ಣು. ಬಾಳೆ ಹೂವಿನಿಂದ ಹಿಡಿದು ದಿಂಡು, ಕಾಯಿ, ಹಣ್ಣು, ಅದರ

Health Tips|ಬಾಳೆಹಣ್ಣು ತಿನ್ನುವುದರಿಂದ ಆಗೋ ಪ್ರಯೋಜನಗಳೇನು ಗೊತ್ತಾ? Read More »

ಸುಳ್ಯ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ

ಸಮಗ್ರ ನ್ಯೂಸ್: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಳ್ಯ ಸಂಪಾಜೆ ವಲಯ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಸೆ.6 ಬುಧವಾರದಂದು ಶ್ರೀ ಮೂಕಾಂಬಿಕಾ ಸಭಾ ಭವನದಲ್ಲಿ ನಡೆಯಿತು. ರತ್ನಕರ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ, ಪಿ.ಆರ್.ಒ.ಸಯ್ಯದ್, ಚಂದ್ರಶೇಖರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಆರಂಬೂರ್ ಒಕ್ಕೂಟ, ಘಟಕ ಸಮಿತಿ ಅಧ್ಯಕ್ಷರು

ಸುಳ್ಯ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ Read More »

ಅಪಘಾತದಲ್ಲಿ ಪಾದಾಚಾರಿ‌ ಸಾವನ್ನಪ್ಪಿದ ಪ್ರಕರಣ| ಸುಳ್ಯದಲ್ಲೇ ನಡೆಯಿತು ಉ.ಕರ್ನಾಟಕ ಕಾರ್ಮಿಕನ ಅಂತ್ಯಸಂಸ್ಕಾರ

ಸಮಗ್ರ ನ್ಯೂಸ್: ಅಡ್ಕಾರಿನಲ್ಲಿ ಪಾದಾಚಾರಿಗೆ ಕಾರು ಗುದ್ದಿದ ಪ್ರಕರಣದಲ್ಲಿ ಸಾವಿಗೀಡಾಗಿದ್ದ ಕೂಲಿ ಕಾರ್ಮಿಕನ ಮೃತದೇಹವನ್ನು ಸುಳ್ಯದಲ್ಲಿಯೇ ಅಂತಿಮ ಸಂಸ್ಕಾರ ನಡೆಸಲಾಯಿತು. ಮಂಗಳವಾರ ರಾತ್ರಿ 37 ವರ್ಷದ ಅಣ್ಣಪ್ಪ ಅನ್ನುವ ವ್ಯಕ್ತಿ ಊಟ ಮುಗಿಸಿಕೊಂಡು ಹಿಂತಿರುಗಿ ಹೋಗುತ್ತಿದ್ದ ವೇಳೆ ಸ್ಕಾರ್ಫಿಯೋ ಕಾರೊಂದು ರಭಸದಿಂದ ಬಂದು ಡಿಕ್ಕಿಯಾಯಿತು. ಡಿಕ್ಕಿಯಾದ ರಭಸಕ್ಕೆ ಅಣ್ಣಪ್ಪ ಸ್ಥಳದಲ್ಲೇ ಧಾರವಾಡದ ಹೊನ್ನೇನಹಳ್ಳಿ ಮೂಲದ ಕಾರ್ಮಿಕ ಸಾವನ್ನಪ್ಪಿದರು. ಮೃತದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ತಂದು ಶವ ಪರೀಕ್ಷೆ ನಡೆಸಲಾಗಿತ್ತು. ಮೃತ ಕಾರ್ಮಿಕನ ಕುಟುಂಬಸ್ಥರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಅಪಘಾತದಲ್ಲಿ ಪಾದಾಚಾರಿ‌ ಸಾವನ್ನಪ್ಪಿದ ಪ್ರಕರಣ| ಸುಳ್ಯದಲ್ಲೇ ನಡೆಯಿತು ಉ.ಕರ್ನಾಟಕ ಕಾರ್ಮಿಕನ ಅಂತ್ಯಸಂಸ್ಕಾರ Read More »

ಸೆ.6 ರಿಂದ 9ರವರೆಗೆ ದ.ಕ‌ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಸೆ.6 ರಿಂದ 9ರವರೆಗೆ ದ.ಕ‌ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ Read More »

ದುರಸ್ತಿ ಆಗುತ್ತಿರುವ ಜನರಲ್ ತಿಮ್ಮಯ್ಯ ಪ್ರತಿಮೆ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಸುಮಾರು ಒಂದು ತಿಂಗಳ ಹಿಂದೆ ಮಡಿಕೇರಿಯ ಬಸ್ ಡಿಕ್ಕಿ ಹೊಡೆದು ಜನರಲ್ ಕೆ.ಎಸ್ ತಿಮ್ಮಯ್ಯರವರ ಪ್ರತಿಮೆ ಹಾನಿಗೊಂಡಿತ್ತು. ಇದೀಗ ಆ ಪ್ರತಿಮೆಯನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಪ್ರತಿಮೆಯ ದುರಸ್ತಿ ಕಾರ್ಯವನ್ನು ಕೈಗೊಂಡಿದ್ದು, ಇಂದು ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದುರಸ್ತಿ ಆಗುತ್ತಿರುವ ಜನರಲ್ ತಿಮ್ಮಯ್ಯ ಪ್ರತಿಮೆ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ Read More »

ಸುಳ್ಯ:ಎನ್ಎಂಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೆ. 5ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ.ಮಮತಾ ಕೆ. ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ.ಅನುರಾಧಾ ಕುರುಂಜಿ ಅವರನ್ನು ಸನ್ಮಾನಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಶಿಕ್ಷಕರು ದಿನದಿಂದ ದಿನಕ್ಕೆ ಹೊಸತನಕ್ಕೆ ತೆರೆದುಕೊಳ್ಳಬೇಕು.

ಸುಳ್ಯ:ಎನ್ಎಂಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ Read More »

ನಾವು ಹಿಂದೂಗಳಲ್ವೇ? ಇದ್ಯಾವುದು ಹೊಸ ಸನಾತನ ಧರ್ಮ?, ಹಿಂದೂ ಎಂದು ಅರಚುತ್ತಿದ್ದವರು ಎಲ್ಲೋದ್ರು? – ನಟ ಕಿಶೋರ್

ಸಮಗ್ರ ನ್ಯೂಸ್: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ಅದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಅಯೋಧ್ಯೆ ಸ್ವಾಮಿಯೊಬ್ಬರು ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿದ್ದಾರೆ. ಇದಕ್ಕೆ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ”ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ

ನಾವು ಹಿಂದೂಗಳಲ್ವೇ? ಇದ್ಯಾವುದು ಹೊಸ ಸನಾತನ ಧರ್ಮ?, ಹಿಂದೂ ಎಂದು ಅರಚುತ್ತಿದ್ದವರು ಎಲ್ಲೋದ್ರು? – ನಟ ಕಿಶೋರ್ Read More »

ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ| ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು-ಕೆ.ಆರ್.ಗೋಪಾಲಕೃಷ್ಣ

ಸಮಗ್ರ ನ್ಯೂಸ್: ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಾರೆ. ಶಿಕ್ಷಕ ಇಡೀ ಸಮಾಜದ ಪರಿವರ್ತಕ, ನಿರ್ಮಾತ್ರ. ಶಿಕ್ಷಕರು ಮಕ್ಕಳಲ್ಲಿ ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದೆಡೆ ಕರೆದುಕೊಂಡು ಹೋಗುವ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಎಂದು ಸೀತಾ ರಾಘವ ಪದವಿಪೂರ್ವ ಕಾಲೇಜು, ಪೆರ್ನಾಜೆ ಇಲ್ಲಿಯ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗೋಪಾಲಕೃಷ್ಣ ಅವರು ಹೇಳಿದರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ. 5ರಂದು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಮತ್ತು ಆಂತರಿಕ ಗುಣಮಟ್ಟ ಖಾತರಿ

ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ| ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು-ಕೆ.ಆರ್.ಗೋಪಾಲಕೃಷ್ಣ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯಾದ್ಯಂತ ಉತ್ತಮ ಮಳೆ ಸಂಭವ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಸಮುದ್ರದ ವಾಯವ್ಯ ಮತ್ತು ಪಶ್ಚಿಮ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಕುರಿತು ಭಾರತೀಯ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಈ ವಾಯುಭಾರ ಕುಸಿತವು ಕರ್ನಾಟಕದ ಮೇಲೆ ಭಾರಿ ಮಳೆ ಸುರಿಸಲಿದೆ. ವಾಯುಭಾರ ಕುಸಿತದ ಸ್ಥಳದಲ್ಲಿ ಸಮುದ್ರ ಮೇಲ್ಮೈನಲ್ಲಿ 7.6 ಕೀಲೋ ಮಿಟರ್ ಎತ್ತರದಲ್ಲಿ ಸುಳಿಗಾಳಿಯೊಂದು ಸೃಷ್ಟಿಯಾಗಿದೆ. ಇದು ದಕ್ಷಿಣಕ್ಕೆ ಓರೆಯಾಗಿದ್ದು, ಅದೇ ಮಾರ್ಗವಾಗಿ ದಟ್ಟಗಾಳಿ ಬೀಸುವ ಸಾಧ್ಯೆತೆಗಳು ಇದೆ. ವಾಯುಭಾರ ಕುಸಿತ ಪ್ರಭಾವ ಕರ್ನಾಟಕದ ಉತ್ತರ ಒಳನಾಡು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯಾದ್ಯಂತ ಉತ್ತಮ ಮಳೆ ಸಂಭವ Read More »