September 2023

ಚಿಕ್ಕಮಗಳೂರು : ನಗರದೆಲ್ಲೆಡೆ ಧಾರಾಕಾರವಾಗಿ ಸುರಿದ ಮಳೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರದ ಹಲವೆಡೆ ಕಳೆದೊಂದು ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬಿಸಿಲ ಧಗೆಗೆ ಬಳಲಿ ಬೆಂಡಾಗಿದ್ದ ಕಾಫಿನಾಡಿಗೆ ವರುಣದೇವ ತಂಪೆರದಂತೆ ಆಗಿದೆ. ಗುಡುಗು-ಮಿಂಚು ಸಹಿತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ. ಕಳೆದೊಂದು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರುಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕಂಡು ರೈತರ ಮೊಗದಲ್ಲಿ ಮಂದಹಾಸ ಬೀರಿದೆ. ಬೆಂಬಿಡದೆ ಸುರಿದ ಮಳೆಗೆ ಚಿಕ್ಕಮಗಳೂರು ನಗರದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ, ಚರಂಡಿ ಬಂದ್ ಆಗಿದೆ. ರಸ್ತೆಯಲ್ಲಿ ಹರಿದ ನೀರಿನಿಂದಾಗಿ ಚಿಕ್ಕಮಗಳೂರು ನಗರದಲ್ಲಿನ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಚಿಕ್ಕಮಗಳೂರು : ನಗರದೆಲ್ಲೆಡೆ ಧಾರಾಕಾರವಾಗಿ ಸುರಿದ ಮಳೆ Read More »

ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಸುಳ್ಳು ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಏನಿದು ಪ್ರಕರಣ?ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಕಾರಿನಲ್ಲಿ ಸುತ್ತಾಟ ನಡೆಸಿದ್ದಾನೆ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿತ್ತು ಎಂಬ ಆರೋಪದ ಮೇಲೆ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು. ವಿಷಯ ಸುದ್ದಿಯಾಗುತ್ತಲೇ ಅರುಣ್ ಕುಮಾರ್ ಪುತ್ತಿಲ ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಯುವಕರನ್ನು ರಿಲೀಸ್ ಮಾಡಿದ್ದಾರೆ ಎಂದು

ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆ Read More »

ಪುತ್ತೂರು: ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ರಕ್ಷಾಬಂಧನ” ಕಾರ್ಯಕ್ರಮ

ಸಮಗ್ರ ನ್ಯೂಸ್: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 30 ರಂದು “ರಕ್ಷಾಬಂಧನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶೇಖರ ನಾರಾವಿ ಇವರು ರಕ್ಷಾಬಂಧನದ ಮೌಲ್ಯಗಳನ್ನು ಮಕ್ಕಳಿಗೆ ಹೇಳಿದರು. ಪುಟಾಣಿ ಮಕ್ಕಳ ಕೈಯಲ್ಲಿ ರಕ್ಷೆಯನ್ನು ಕಟ್ಟಿಸಿ, ಮಕ್ಕಳಿಗೆ ಸಿಹಿ ತಿಂಡಿ ನೀಡಿ ಆಶೀರ್ವಾದಿಸಿದರು. ಈ ಪುಟ್ಟ ಸಂಸ್ಥೆಯು ಒಂದು ಉತ್ತಮ ವಿದ್ಯಾಸಂಸ್ಥೆಯಾಗಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷರಾದ ವೆಂಕಟರಮಣ

ಪುತ್ತೂರು: ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ರಕ್ಷಾಬಂಧನ” ಕಾರ್ಯಕ್ರಮ Read More »

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಉದ್ಯೋಗ ಅವಕಾಶ| ಇಲ್ಲಿದೆ ಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಸಿಹಿಸುದ್ದಿ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇತ್ತೀಚೆಗೆ ಉದ್ಯೋಗ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕಂಪ್ಯೂಟರ್‌ ಪ್ರೋಗ್ರಾಮರ್‌ ಮತ್ತು ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಒಟ್ಟು 125 ಹುದ್ದೆಗಳಿವೆ. ಪದವಿ ಮತ್ತು ಡಿಪ್ಲೊಮಾ ವಿದ್ಯಾರ್ಹತೆ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಕಂಪ್ಯೂಟರ್

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಉದ್ಯೋಗ ಅವಕಾಶ| ಇಲ್ಲಿದೆ ಪೂರ್ಣ ಮಾಹಿತಿ Read More »

ಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣ ಅನರ್ಹ| ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಶುಕ್ರವಾರ ಆದೇಶ ಹೊರಡಿದಿದೆ. ಜೆಡಿಎಸ್‌ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಎಂ.ಪಿ. ಪ್ರಜ್ವಲ್ ರೇವಣ್ಣ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು 2019ರಲ್ಲಿ ಹೈಕೋರ್ಟ್ ನಲ್ಲಿ ಅವರ ವಿರುದ್ಧ ಅರ್ಜಿ

ಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣ ಅನರ್ಹ| ಹೈಕೋರ್ಟ್ ನಿಂದ ಮಹತ್ವದ ಆದೇಶ Read More »

ಕೊಡಗು:ಅಕ್ರಮ ಮದ್ಯ ತಯಾರಿಕೆ ಪ್ರಕರಣ

ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ವಾಪ್ತಿಯ ಭಾಗಮಂಡಲ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಅಕ್ರಮವಾಗಿ ಮದ್ಯ ತಯಾರಿಕೆ ಮಾಡುತ್ತಿದ್ದ ಪ್ರಕರಣವನ್ನು ಆ. 31ರಂದು ಪತ್ತೆ ಮಾಡುವಲ್ಲಿ ಕೊಡಗು ಜಿಲ್ಲಾ ಪೊಲೀಸ್‌ ಯಶಸ್ವಿಯಾಗಿದೆ. ಭಾಗಮಂಡಲ ಠಾಣಾ ಸರಹದ್ದಿನ ತಾವೂರು ಗ್ರಾಮದ ತೋಟದ ಲೈನ್‌ ಮನೆಯೊಂದರಲ್ಲಿ ಅಕ್ರಮವಾಗಿ ಕೇರಳ ರಾಜ್ಯದಲ್ಲಿ ಮಾರಾಟ ಮಾಡಲು ಅಮಲೇರಿಸುವ ಪದಾರ್ಥ ಬಳಸಿ ಮದ್ಯ ತಯಾರಿಕೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇಲೆ DCRB ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ, ಭಾಗಮಂಡಲ ಠಾಣಾ ಪಿ.ಎಸ್‌.ಐ ಮತ್ತು

ಕೊಡಗು:ಅಕ್ರಮ ಮದ್ಯ ತಯಾರಿಕೆ ಪ್ರಕರಣ Read More »

ವಿರಾಜಪೇಟೆ: ಮಟ್ಕಾ ದಂಧೆ ಪತ್ತೆ| ಇಬ್ಬರ ಬಂಧನ

ಸಮಗ್ರ ನ್ಯೂಸ್:ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಚೊಕಂಡಳ್ಳಿಯಲ್ಲಿ ಮಟ್ಕಾ ದಂಧೆಯಲ್ಲಿ ತೊಡಗಿದ್ದ ಇಬ್ಬರ ಬಂಧನ. ಆ. 31ರ ಸಂಜೆ 6 ಗಂಟೆ ಸಮಯದಲ್ಲಿ ಚೋಕಂಡಳ್ಳಿ ಅಂಗಡಿಯೊಂದರ ಸಮೀಪ ಹೊರ ರಾಜ್ಯದ ಲಾಟರಿ ಫಲಿತಾಂಶಕ್ಕೆ ಚೀಟಿ ಕೊಡುವ ಮೂಲಕ ಮಟ್ಕಾ ದಂಧೆ ನಡೆಸುತ್ತಿದ್ದ ಖಚಿತ ವರ್ತಮಾನದ ಮೇಲೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳಾದ ಆಟೋ ಚಾಲಕ ಕಿರಣ್ ಲೋಬೊ ಮತ್ತು ಅಝೀಜ್ ಎಂಬುವವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮಟ್ಕಾ ದಂಧೆಗೆ ಬಳಸಲಾದ 2140 ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ

ವಿರಾಜಪೇಟೆ: ಮಟ್ಕಾ ದಂಧೆ ಪತ್ತೆ| ಇಬ್ಬರ ಬಂಧನ Read More »

ಬೆಳ್ತಂಗಡಿ: ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಕಬಡ್ಡಿ ಆಟಗಾರ ಆತ್ಮಹತ್ಯೆ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೋನ್ ಆಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಏನಿದು ಘಟನೆ..?ಸ್ವರಾಜ್ ತನ್ನ ವಾಟ್ಸಾಪ್ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದನು. ಈ ಫೋಟೋವನ್ನು ಲೋನ್ ಆಯಪ್ನವರು ಎಡಿಟ್ ಮಾಡಿ ಮಾರಾಟಕ್ಕಿದೆ ಎಂದು ಸ್ವರಾಜ್ ಸ್ನೇಹಿತರು, ಹಾಗೂ ಆತನ ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಲಾಗಿತ್ತು. ಈ ಟಾರ್ಚರ್ ತಾಳಲಾರದೇ ಆಗಸ್ಟ್ 30

ಬೆಳ್ತಂಗಡಿ: ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಕಬಡ್ಡಿ ಆಟಗಾರ ಆತ್ಮಹತ್ಯೆ!? Read More »

‘ರಿಪಬ್ಲಿಕ್’ ಮಡಿಲಿಗೆ ದಿಗ್ವಿಜಯ| ವಿಆರ್ ಎಲ್ ಸಮೂಹದಿಂದ ಖರೀದಿ ಮಾಡಿದ ಆರ್ನಬ್ ಗೋಸ್ವಾಮಿ

ಸಮಗ್ರ ನ್ಯೂಸ್:ವಿಆರ್‌ಎಲ್ ಸಮೂಹದ ‘ದಿಗ್ವಿಜಯ’ ಸುದ್ದಿವಾಹಿನಿ ಅಧಿಕೃತವಾಗಿ ರಿಪಬ್ಲಿಕ್ ತೆಕ್ಕೆಗೆ ಸೇರಿದೆ ಎಂದು ಮೂಲಗಳು ತಿಳಿಸಿವೆ. ವಿಜಯ್ ಸಂಕೇಶ್ವರ್ ಮಾಲೀಕತ್ವದ ವಿಆರ್‌ಎಲ್‌ ಸಂಸ್ಥೆ 2017ರಲ್ಲಿ ದಿಗ್ವಿಜಯ ಟಿವಿ ಚಾನೆಲ್ ಅನ್ನು ಆರಂಭಿಸಿತ್ತು. ಆದರೀಗ ಈ ಸಂಸ್ಥೆಯನ್ನು ರಾಷ್ಟ್ರಮಟ್ಟದಲ್ಲಿ ಸತತ ಐದು ವರ್ಷಗಳಿಂದ ನಂಬರ್ 1 ಸ್ಥಾನದಲ್ಲಿರುವ ರಿಪಬ್ಲಿಕ್ ಚಾನಲ್‌ನೊಂದಿಗೆ ವಿಲೀನಗೊಳಿಸಲಾಗಿದೆ. ಮುಂದಿನ ಕೆಲ ತಿಂಗಳ ಕಾಲ ‘ದಿಗ್ವಿಜಯ’ ಎನ್ನುವ ಹೆಸರಿನಲ್ಲಿಯೇ ಸುದ್ದಿವಾಹಿನಿ ಮುಂದುವರಿಯಲಿದ್ದು,ಆದಾದ ಬಳಿಕ ‘ರಿಪಬ್ಲಿಕ್ ಕನ್ನಡ’ಎನ್ನುವ ಹೆಸರಿನಲ್ಲಿ ಕಾರ್ಯಚರಣೆ ನಡೆಸುವುದು ಎಂದು ತಿಳಿದು ಬಂದಿದೆ. ‘ಇಂಡಿಯಾ

‘ರಿಪಬ್ಲಿಕ್’ ಮಡಿಲಿಗೆ ದಿಗ್ವಿಜಯ| ವಿಆರ್ ಎಲ್ ಸಮೂಹದಿಂದ ಖರೀದಿ ಮಾಡಿದ ಆರ್ನಬ್ ಗೋಸ್ವಾಮಿ Read More »

ಸಂಪಾದಕೀಯ: ಸೌಜನ್ಯ ಹೋರಾಟ‌ ಬೀದಿ ರಂಪಾಟವಾಗುವ ಬದಲು ಸಂಘಟನಾತ್ಮಕವಾಗಿರಲಿ

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳಿಗೆ ನ್ಯಾಯಕ್ಕಾಗಿ ರಾಜ್ಯವ್ಯಾಪಿ ಹೋರಾಟಗಳು ನಡೆಯುತ್ತಿವೆ. ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ಬಂದ ಬಳಿಕ ಈ ಕುಕೃತ್ಯ ನಡೆಸಿದ ನಿಜವಾದ ಪಾತಕಿಗಳು ಯಾರು? ಎಂಬುದು ಬಹುಚರ್ಚಿತ ವಿಷಯ. ಮೊದಮೊದಲು ಏಕಮುಖವಾಗಿದ್ದ ಹೋರಾಟ ಈಗೀಗ ದಿಕ್ಕು ತಪ್ಪುವ ಲಕ್ಷಣಗಳು ಕಾಣುತ್ತಿವೆ. ಕಳೆದ ಸೆ.27 ಮತ್ತು 28ರಂದು ನಡೆದ ಎರಡು ಹಕ್ಕೊತ್ತಾಯ ಸಭೆಗಳು ಹೋರಾಟದ ಹಾದಿಯನ್ನೇ ಬದಲಿಸಿಬಿಟ್ಟಿವೆ. ಸೌಜನ್ಯಳ ನ್ಯಾಯದ ಹೋರಾಟದ

ಸಂಪಾದಕೀಯ: ಸೌಜನ್ಯ ಹೋರಾಟ‌ ಬೀದಿ ರಂಪಾಟವಾಗುವ ಬದಲು ಸಂಘಟನಾತ್ಮಕವಾಗಿರಲಿ Read More »