ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆಯು ಸೆ. 30ರಂದು ನಡೆಯಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 2023-24 ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಕೇಶವ ಬಂಗೇರ, ಮಂಗಳೂರು ಕಾಲೇಜಿನ ಕನ್ನಡ ಉಪನ್ಯಾಸಕರು ನಾರಾಯಣಗುರು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ದೇವಳದ ಕಛೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿವಸುಬ್ರಹ್ಮಣ್ಯ ಭಟ್, ದೇವಳದ ಕಚೇರಿಯಲ್ಲಿ ವಿದ್ಯಾಸಂಸ್ಥೆಗಳ ವಿಷಯ ನಿರ್ವಾಹಕರು ಇವರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಪರಿಷತ್ತಿನ ಸಹ ಸಲಹೆಗಾರರಾದ ಪ್ರೊ.ಪ್ರಮೀಳ ಇವರು ವಿದ್ಯಾರ್ಥಿ ಪರಿಷತ್ತಿನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಹಳ್ಳಿ ಮದ್ದನ್ನು ನೀಡುತ್ತಿರುವ, ದೈವ ನರ್ತಕ ರೇಗಪ್ಪ ಸುಬ್ರಹ್ಮಣ್ಯ ಇವರನ್ನು ಮತ್ತು ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಾದ ಶ್ರಾವ್ಯ ಮುತ್ಲಾಜೆ, ಸಿಂಧೂರ, ಹಾಗೂ ಕೌಸಲ್ಯ ಇವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಪರಿಷತ್ತಿನ ಸಲಹೆಗಾರ ಪ್ರೊ.ಪ್ರಸಾದ್.ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ., ಆಂತರಿಕ ಗುಣಮಟ್ಟ ಮತ್ತು ಭರವಸಾಕೋಶದ ಸಂಯೋಜಕಿ ಲತಾ ಬಿ.ಟಿ, ರೇಗಪ್ಪ ಸುಬ್ರಹ್ಮಣ್ಯ, ವಿದ್ಯಾರ್ಥಿ ಪರಿಷತ್ತಿನ ಸಲಹೆಗಾರ ಪ್ರಸಾದ್.ಎನ್, ಸಹಸಲಹೆಗಾರ ಪ್ರೊ.ರಾಮ್ ಪ್ರಸಾದ್ ಮತ್ತು ಪ್ರೊ.ಪ್ರಮೀಳಾ ಹಾಗೂ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸುಹಾಸ್ ಎಂ.ಜಿ., ಉಪಾಧ್ಯಕ್ಷೆ ಪೂಜಾ.ಎಂ, ಕಾರ್ಯದರ್ಶಿ ಕೌಶಿಕ್ ಕೆ.ವಿ. ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಪೂರ್ವ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಪರಿಷತ್ತಿನ ಉಪಾಧ್ಯಕ್ಷೆ ಪೂಜಾ ಎಂ ಸ್ವಾಗತಿಸಿ, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸುಹಾಸ್ ಎಂ.ಜಿ ವಂದಿಸಿದರು. ಕಲ್ಪನಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.