Ad Widget .

ಮೈಸೂರು: ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲು

ಸಮಗ್ರ ನ್ಯೂಸ್: ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲಾದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡದಿದೆ.

Ad Widget . Ad Widget .

ಘಟನೆಯಲ್ಲಿ ಮಹಮ್ಮದ್ ಕಪೀಲ್ (42), ಶಾವರ ಭಾನು (35), ಶಾಹೀರಾ ಭಾನು (20)ಮೃತಪಟ್ಟಿದ್ದಾರೆ. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಮಗಳನ್ನು ಕಾಪಾಡಲು ಹೋಗಿ ಅಪ್ಪ, ಅಮ್ಮ ಹಾಗೂ ಪುತ್ರಿ ಮೂವರೂ ಸಾವನ್ನಪ್ಪಿದ್ದಾರೆ. ನುಗು ಜಲಾಶಯದ (Nugu Reservoir) ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಘಟನೆ ನಡೆದಿದೆ. ಶಾಹೀರಾ ಭಾನು ಮೊದಲಿಗೆ ಕಾಲು ಜಾರಿ ಬಿದ್ದಿದ್ದು, ರಕ್ಷಣೆಗೆ ಹೋದ ಅಪ್ಪ, ಅಮ್ಮ ಸೇರಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Ad Widget . Ad Widget .

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಮೂವರ ಮೃತ ದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *