ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ಬಸ್ ಕ್ಷೇತ್ರದಲ್ಲಿ ಬಹಳಷ್ಟು ಹೆಸರುವಾಸಿಯಾದ ಮಹೇಶ್ ಬಸ್ ಮಾಲಕ ತಾನು ವಾಸಿಸುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಜಯರಾಮ ಶೇಖ ಎಂಬವರ ಪುತ್ರ ಪ್ರಕಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಕ್ಷೇತ್ರದಲ್ಲಿ ತುಳುನಾಡಿನಲ್ಲಿ ಹೆಸರುವಾಸಿಯಾದ ಮಹೇಶ್ ಬಸ್ ನೂರಾರು ಬಸ್ ಗಳನ್ನು ಹೊಂದಿದೆ.

ಅವರು ಕದ್ರಿ ಕಂಬಳ ಸಮೀಪ ಇರುವ ಮೊರಿಸ್ಕಾ ಅಪಾರ್ಟ್ ಮೆಂಟ್ ನಿಂದ ನೇಣು ಬಿಗಿದು ಆತ್ಮಹತ್ಯೆಗೈದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕಾಶ್ ರ ಆತ್ಮಹತ್ಯೆ ಕರಾವಳಿಯಲ್ಲಿ ದಿಗ್ಭ್ರಮೆ ಮೂಡಿಸಿದೆ.