Ad Widget .

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಅ.2 ರಂದು ಪೋಷಕರ ಸಮ್ಮುಖದಲ್ಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

Ad Widget . Ad Widget .

ಕಾರ್ಯಕ್ರಮದಲ್ಲಿ ಎಲ್ಲಾ ಪೋಷಕರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಾಂಧೀಜಿಯವರ ಚರಿತ್ರೆ ಮತ್ತು ತತ್ವಗಳಾದ ಸತ್ಯ ಮತ್ತು ಅಹಿಂಸೆ ಬಗ್ಗೆ ಕಥೆಯ ಮುಖಾಂತರ ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಅವರು ತಿಳಿಸಿಕೊಟ್ಟರು. ಮಕ್ಕಳು ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ವೇಷ ಭೂಷಣ ಧರಿಸಿ ಚರಿತ್ರೆಯ ಬಗ್ಗೆ ತಿಳಿದುಕೊಂಡರು. ಕೊನೆಯಲ್ಲಿ ಗಾಂಧೀಜಿಯವರ ಪ್ರಿಯವಾದ ರಘುಪತಿ ರಾಘವ ರಾಜಾರಾಮ್ ಭಜನೆ ಹಾಡುವ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.

Ad Widget . Ad Widget .

ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *