Ad Widget .

ಬೆಂಗಳೂರು: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ​ಕಾರಿಗೆ ಕಾರಿಗೆ ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದು ಸುಟ್ಟು ಭಸ್ಮವಾದ ಘಟನೆ ಶನಿವಾರ ನಡೆದಿದೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Ad Widget . Ad Widget .

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಘಟನೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ವರದಿ ಆಗಿದೆ.

Ad Widget . Ad Widget .

ಈ ಎಲೆಕ್ಟ್ರಿಕ್ ಕಾರನ್ನು ಸ್ವತಃ ಮಾಲೀಕರೆ ಚಲಾಯಿಸುತ್ತಿದ್ದರು. ಮುಂದಿನ ಕಾರು ಬಾನೆಟ್ ಮೇಲೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಕಾರು ನಿಲ್ಲಿಸಿ ಹೊರಗೆ ಬಂದಿದ್ದಾರೆ. ಈ ವೇಳೆ ಕಾರು ಡಾಲ್ಮಿಯ ಮೇಲ್ಸೇತುವೆ ಮೇಲೆ ಸಂಚರಿಸುತ್ತಿತ್ತು. ನೋಡ ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕಾರು ಹೊತ್ತಿ ಉರಿದಿದೆ, ಬೆಂಕಿ ಜ್ವಾಲೆ, ಹೊಗೆ ದಟ್ಟವಾಗಿ ಮೇಲೆಳಿತು ಎಂದು ಪುಟ್ಟೇನಹಳ್ಳಿ ರಾಣೆ ಪೊಲೀಸರು ಮಾಹಿತಿ ನೀಡಿದರು.

ಸದ್ಯ ಇದು ಯಾವ ಕಂಪನಿಯ ಕಾರು ಎಂಬುದು ತಿಳಿದು ಬಂದಿಲ್ಲ. ಸಾಮಾಜಿಕ ಜಾಲತಾಣ ‍‍X ನಲ್ಲಿ ಹಲವರು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಕೆಲವರು ಎಂಜಿ ಹೆಕ್ಟರ್ ರೀತಿಯ ಕಾರಿನಂತೆ ಕಾಣುತ್ತದೆ ಎಂದಿದ್ದಾರೆ. ಆದರೆ ಈ ಬಗ್ಗೆ ಯಾವ ಕಾರಿನ ಕಂಪನಿ ಸಹ ಪ್ರತಿಕ್ರಿಯಿಸಿಲ್ಲ. ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಎಲೆಕ್ಟ್ರಿಕ್ ಕಾರು ಮತ್ತು ಬೈಕ್‌ಗಳ ಖರೀದಿ ಹೆಚ್ಚಾಗಿದ್ದು, ಈ ಬಗ್ಗೆ ಪೂರ್ತಿ ಕಾರಣ ತಿಳಿದು ಬರಬೇಕಿದೆ.

Leave a Comment

Your email address will not be published. Required fields are marked *