ಮಣಿಪಾಲ: ಡಿಜೆ ಪಾರ್ಟಿ-ಇನ್ಸ್ಟಾಗ್ರಾಮ್ ಪೋಸ್ಟ್/ಬಾರ್ ಒಳಗೆ ನುಗ್ಗಿದ ಪೊಲೀಸರು

ಸಮಗ್ರ ನ್ಯೂಸ್: ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್ ಮೇಲೆ ದಾಳಿ ನಡೆಸಿದ್ದು, ಅನುಮತಿಯಿಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

. Ad Widget . Ad Widget

ಇನ್ಸ್ಟಾಗ್ರಾಮ್ ಪೋಸ್ಟ್ ಗಮನಿಸಿ ಬಾರ್ ಮೇಲೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡನಡೆಸಿದ್ದಾರೆ. ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಹಾಗೂ ಹುಕ್ಕಾ, ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದರು. ವೀಕೆಂಡ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ಈ ವಿಚಾರ ತಿಳಿದ ತಕ್ಷಣ ಕಾರ್ಯಾಚರಣೆ ನಡೆಸಿ ಬಾರ್ ಮೇಲೆ ದಾಳಿ ನಡೆಸಿದ್ದಾರೆ.

. Ad Widget . . Ad Widget . Ad Widget

ಮಣಿಪಾಲ ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್ ಮೇಲೆ ದಾಳಿ ನಡೆಸಿ, ಬಾರ್ ಡಿಜೆ ಪಾರ್ಟಿ ಮಾಡಲು ಅನುಮತಿ ನೀಡಿದ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಇದರ ಜೊತೆಗೆ ಅನುಮತಿ ಇಲ್ಲದೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *