Ad Widget .

ಕಡಬ: ಸ್ಕೂಟರ್ ಡಿಕ್ಕಿ; ಪಾದಚಾರಿ ಮಹಿಳೆ ಸಾವು

ಸಮಗ್ರ ನ್ಯೂಸ್:- ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಆ .1 ರಂದು ರಾತ್ರಿ ನಡೆದಿದೆ.

Ad Widget . Ad Widget .

ಮೃತ ಮಹಿಳೆ ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ತಿಳಿದಿದ್ದು, ಇವರು ಭಾನುವಾರ ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ.

Ad Widget . Ad Widget .

ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *