Ad Widget .

ಉದ್ಯೋಗಾಕಾಂಕ್ಷಿಗಳೇ ಇಲ್ಲಿ ಗಮನಿಸಿ/ ಅಕ್ಟೋಬರ್ 6 ಮತ್ತು 7 ರಂದು ಆಳ್ವಾಸ್ ಪ್ರಗತಿ ಮೇಳ

ಸಮಗ್ರ ನ್ಯೂಸ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ – 2023’ ಇದೇ ಅಕ್ಟೋಬರ್ 6 ಮತ್ತು 7 ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ 200ಕ್ಕೂ ಅಧಿಕ ಪ್ರತಿಷ್ಟಿತ ಕಂಪೆನಿಗಳು ಭಾಗವಹಿಸುತ್ತಿದ್ದು, ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಿ ಕೊಡಲಿದೆ.

Ad Widget . Ad Widget .

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಈಗಾಗಲೇ 165 ಕಂಪೆನಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಹೆಚ್ಚುವರಿಯಾಗಿ 35 ಕಂಪೆನಿಗಳು ಉದ್ಯೋಗಾವಕಾಶಗಳನ್ನು ಒದಗಿಸಿಕೊಡಲಿದೆ. ಇದರಲ್ಲಿ ಮೂರು ಕಂಪೆನಿಗಳು ಕೊಲ್ಲಿ ರಾಷ್ಟ್ರಗಳಿಂದ ಆಗಮಿಸಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉದ್ಯೋಗಗಳನ್ನು ಕಲ್ಪಿಸಿಕೊಡಲಿದೆ.

Ad Widget . Ad Widget .

ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ ಅಧಿಕೃತ ವೆಬ್‍ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು 5 ರಿಂದ 10 ಪಾಸ್‍ಪೋರ್ಟ್ ಪೋಟೋಗಳು, ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಆನ್‍ಲೈನ್ ನೋಂದಣಿಯ ನಂಬರ್ ಹಾಗೂ ಗುರುತು ಚೀಟಿಯನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9008907716, 9663190590, 7975223865 ಯನ್ನು ಸಂಪರ್ಕ ಮಾಡಬಹುದು.

Leave a Comment

Your email address will not be published. Required fields are marked *