ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಛತ್ತೀಸ್​ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್ ಗೆ ತೆರಳಲಿದ್ದಾರೆ. ಹಾಗೇ ಸಂಜೆ 5:55ಕ್ಕೆ ನಿಜಾಮಾಬಾದ್ ನಿಂದ ವಾಪಸ್​ ಬೀದರ್ ಏರ್ ಬೇಸ್​ಗೆ ಬಂದು 6 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget ... ..

ಛತ್ತೀಸ್‌ಗಢದ ಕಾರ್ಯಕ್ರಮ ಮುಗಿಸಿದ ಬಳಿಕ ಪ್ರಧಾನಿ ಮೋದಿ ಅವರು ತೆಲಂಗಾಣದ ನಿಜಾಮಾಬಾದ್‌ಗೆ ತೆರಳಿದ್ದಾರೆ. ಅಲ್ಲಿ ವಿದ್ಯುತ್, ರೈಲು ಮತ್ತು ಆರೋಗ್ಯ ಇಲಾಖೆಯ ಸುಮಾರು 8000 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

Ad Widget

Leave a Comment

Your email address will not be published. Required fields are marked *