ಸಮಗ್ರ ನ್ಯೂಸ್: ಬಿಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಇದೀಗ ಗುಡ್ ನ್ಯೂಸ್ ನೀಡಿದೆ. ಹೌದು, ಬಿಪಿಎಲ್ ಕಾರ್ಡ್ಗೆ ಫಲಾನುಭವಿ ಹೆಸರು ಸೇರ್ಪಡೆ ಮಾಡಿ, ತಿದ್ದುಪಡಿಗೆ ಅವಕಾಶ ಕೊಟ್ಟಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ.
ಇದನ್ನ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗಧಿತ ದಿನಾಂಕವನ್ನು ಕೊಡಲಾಗಿದೆ.
ಅಕ್ಟೋಬರ್ 5 ರಿಂದ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ.
ಇನ್ನು 2ನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಿಗೆ ಅ.8 ರಿಂದ ಅ.10ರವರೆಗೆ BPL ಕಾರ್ಡ್ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ.
ಇನ್ನು 3ನೇ ಹಂತದಲ್ಲಿ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅ.11 ರಿಂದ ಅ.13ರವರೆಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.