ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಮತ್ತೆ ಏರುಪೇರು

ಸಮಗ್ರ ನ್ಯೂಸ್: ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ನಿನ್ನೆ ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಮ್ಮಕ್ಕ ದತ್ತು ಪುತ್ರ ಬಳ್ಳೂರು ಉಮೇಶ್ ಮಾಹಿತಿ ನೀಡಿದ್ದಾರೆ.

Ad Widget ... ..

ಬೆಂಗಳೂರಿನಿಂದ ತೆರಳಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಾಸವಿದ್ದರು. ಬೇಲೂರು ಮಲೆನಾಡು ಪ್ರದೇಶ ಆಗಿರುವುದರಿಂದ ಶೀತ ಜಾಸ್ತಿಯಾಗಿದೆ. ಕಳೆದ ಮೂರು ದಿನಗಳಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕವೂ ಕಡಿಮೆಯಾಗಿರಲಿಲ್ಲ ನಿನ್ನೆ ಉಸಿರಾಟದ ಸಮಸ್ಯೆ ಹೆಚ್ಚಳ ಹಿನ್ನೆಲೆ ಬೆಂಗಳೂರಿಗೆ ಕರೆತಂದಿದ್ದೇವೆ. ಡಾ.ರವೀಂದ್ರ ಮೆಹ್ತಾ ತಂಡ ಸಾಲುಮರದ ತಿಮ್ಮಕ್ಕರಿಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಬಳ್ಳೂರು ಉಮೇಶ್ ಹೇಳಿದ್ದಾರೆ.

Ad Widget

ಇತ್ತೀಚೆಗಷ್ಟೇ ತಿಮ್ಮಕ್ಕ ಬೆಂಗಳೂರಿನ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಹಾಗಾಗಿ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಾಲುಮರದ ತಿಮ್ಮಕ್ಕ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಳ್ಳೂರಿನಲ್ಲಿರುವ ನಿವಾಸದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಆ ಸಂದರ್ಭದಲ್ಲಿ ಸಹ ಮೈ ಕೈ ನೋವು ಹಾಗೂ ಸುಸ್ತು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದರು. ತಿಮ್ಮಕ್ಕ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ಹಾಸನ ಜಿಲ್ಲಾಡಳಿತ ಇಬ್ಬರು ನರ್ಸ್​ಗಳನ್ನು ನಿಯೋಜನೆ ಮಾಡಿತ್ತು. ಆದ್ರೆ, ತಿಮ್ಮಕ್ಕ ಅವರಿಗೆ ಉಸಿರಾಟದ ಸಮಸ್ಯೆಯಾಗಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು

Leave a Comment

Your email address will not be published. Required fields are marked *