Ad Widget .

ಪುನಿತ್ ಕೆರೆಹಳ್ಳಿ ಆರೋಗ್ಯ ವಿಚಾರಿಸಿದ ಬಿಜೆಪಿ ನಿಯೋಗ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಾಥ್

ಸಮಗ್ರ ನ್ಯೂಸ್: ವಿನಾಃ ಕಾರಣ ತಮ್ಮನ್ನು ಗೂಂಡಾ ಕಾಯ್ದೆಯಲ್ಲಿ ಸಿಲುಕುವಂತೆ ಕಾಂಗ್ರೆಸ್ ಸರ್ಕಾರ ಮಾಡಿದೆ ಹೀಗಾಗಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಹಿಂದೂ ಕಾರ್ಯಕರ್ತ ಪುನೀತ್ ಕೇರೆಹಳ್ಳಿ ಅನಿರ್ದಿಷ್ಟಾವಧಿಯವರೆಗೂ ಉಪವಾಸ ಕೈಗೆತ್ತಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget . Ad Widget .

ಇಂದು ಅವರನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಹಾಗೂ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿದರು.

Ad Widget . Ad Widget .

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಮಾಜಘಾತುಕ ಜಿಹಾದಿಗಳನ್ನು ಅಮಾಯಕರೆಂದು ಬಿಡುಗಡೆ ಮಾಡುವ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ, ನಕಲಿ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದೆ. ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮೇಲಿನ ಆರೋಪಗಳು ಸಾಬೀತಾಗದಿದ್ದರೂ ಆತನ ವಿರುದ್ಧ ಬೇರೆ ಪ್ರಕರಣಗಳಲ್ಲಿ ಸಿಲುಕಿಸಿ ಸರ್ಕಾರ ಹತ್ತಿಕ್ಕುವ ಕೃತ್ಯವೆಸಗುತ್ತಿದೆ ಎಂದು ಆರೋಪಿಸಿದೆ

Leave a Comment

Your email address will not be published. Required fields are marked *