Ad Widget .

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget . Ad Widget .

ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ ಪ್ರಸಿದ್ಧ ಮೇಳವಾದ ಪಾವಂಜೆ ಕ್ಷೇತ್ರದ ಕಲಾವಿದರು ಪ್ರದರ್ಶನ ನೀಡಿದರು. ಯಕ್ಷಗಾನ ಭಾಗವತಿಕೆಯ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್‌ ಶೆಟ್ಟಿ ಇಲ್ಲಿಯೂ ಮೋಡಿ ಮಾಡಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್‌ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ಆಯೋಜಿಸಿದ್ದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು. ಈ ಯಕ್ಷಗಾನ ಕಾರ್ಯಕ್ರಮ ಜನರಿಗೆ ಅತ್ಯಂತ ಸಂತೋಷದಾಯಕವಾಗಿದೆ. ಹೀಗಾಗಿ, ನವರಾತ್ರಿ ವೇಳೆ ಮತ್ತೊಮ್ಮೆ ಇದೇ ಪ್ರದರ್ಶನ ನೀಡಬೇಕು ಎಂದು ಆಹ್ವಾನ ನೀಡಿದೆ ಎಂದು ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *