Ad Widget .

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿ| ಏಳು ಮಂದಿ ಸಾವು; ಐದು ಕೋಟಿಗೂ ಅಧಿಕ ನಷ್ಟ

ಸಮಗ್ರ ನ್ಯೂಸ್: ಲಾರಿಯಲ್ಲಿ ಪಟಾಕಿ ಅನ್​ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, ಏಳು ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ಸಂಜೆ ವರದಿಯಾಗಿದೆ.

Ad Widget . Ad Widget .

ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಂಗಡಿಯೊಳಡೆ ಪರಿಶೀಲನೆ ನಡೆಸುವಾಗ, ಏಳು ಮೃತದೇಹಗಳು ಪತ್ತೆಯಾಗಿವೆ.

Ad Widget . Ad Widget .

ಮಳಿಗೆಯಲ್ಲಿ ಸುಮಾರು ಐದು ಕೋಟಿ ಮೌಲ್ಯದ ಪಟಾಕಿಗಳ ಸಂಗ್ರಹ ಇತ್ತು ಎನ್ನಲಾಗಿದೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪಟಾಕಿ ಮಳಿಗೆಯಲ್ಲಿ 30-40 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹಿಂಬಾಗಿಲಿನಿಂದ ಹೊರಬಂದಿದ್ದರಿಂದ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳೀಯರೂ ಕೂಡ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದು, ಅಂಗಡಿ ಸುಟ್ಟು ಕರಕಲಾಗಿದೆ.

Leave a Comment

Your email address will not be published. Required fields are marked *