ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಅಧಿಕಾರಿಗಳ ತಂಡವು ರಾಜ್ಯದ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿದ್ದು, ಹತ್ತು ದಿನಗಳ ಒಳಗಾಗಿ ತನ್ನ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ಪರಿಹಾರಧನದ ಕುರಿತು ನಿರ್ಧಾರವಾಗಲಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಲ್ಲಿ ಸಹಾಯಧನ ನೀಡುವಂತೆ ಕೋರಲಾಗಿತ್ತು. ಈ ಕುರಿತು ಕೇಂದ್ರ ಕೃಷಿ ಸಚಿವರ ಭೇಟಿಗೆ ಪ್ರಯತ್ನಸಿದ್ದರೂ, ಅದು ಸಫಲವಾಗಿರಲಿಲ್ಲ. ಇದೀಗ ಕೇಂದ್ರದ ಅಧಿಕಾರಿಗಳ ತಂಡ ಅಧ್ಯಯನ ನಡೆಸಿದ್ದು, ಕೇಂದ್ರದ ಪರಿಹಾರಧನದ ನಿರೀಕ್ಷೆಯಲ್ಲಿದ್ದೇವೆ ಎಂದು ಅವರು ಹೇಳಿದರು.