ಸಮಗ್ರ ನ್ಯೂಸ್: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ. ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಇಂದು ಚುನಾವಣಾ ಆಯೋಗವು ಪ್ರಕಟ ಮಾಡಲಿದೆ. ಈ ಕುರಿತು ಚುನಾವಣಾ ಆಯೋಗವು ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ.
ಮಧ್ಯಪ್ರದೇಶದ 230, ರಾಜಸ್ಥಾನದ 200, ತೆಲಂಗಾಣದ 119, ಛತ್ತೀಸ್‍ಗಢದ 90 ಮತ್ತು ಮಿಜೋರಾಂನ 40 ವಿಧಾನಸಭಾ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಿಜೋರಾಂನ ವಿಧಾನಸಭೆಯ ಅವಧಿ ಡಿಸೆಂಬರ್‍ನಲ್ಲಿ ಕೊನೆಗೊಳ್ಳುತ್ತಿದ್ದರೆ, ಉಳಿದ ನಾಲ್ಕು ರಾಜ್ಯಗಳ ವಿಧಾನಸಭೆಯ ಅವಧಿ ಜನವರಿಯಲ್ಲಿ ಮುಕ್ತಾಯಗೊಳ್ಳಲಿದೆ.
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳಿಗೂ ಈ ಚುನಾವಣೆ ಪ್ರಮುಖ ಎನಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಭಾವಿಸಲಾಗುತ್ತಿದೆ.
ಪ್ರಸ್ತುತ ರಾಜಸ್ಥಾನ ಮತ್ತ ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ಸರಕಾರವಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಸರಕಾರವಿದ್ದು, ಈಶಾನ್ಯ ರಾಜ್ಯವಾದ ಮಿಜೋರಾಂನಲ್ಲಿ ಎಂಎನ್‍ಎಫ್ ಮತ್ತು ಬಿಜೆಪಿ ಮೈತ್ರಿಕೂಟ ಆಡಳಿತದಲ್ಲಿದೆ. ತೆಲಂಗಾಣದಲ್ಲಿ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‍ಎಸ್ ಪಕ್ಷ ಅಧಿಕಾರ ವಹಿಸಿಕೊಂಡಿದೆ.