Ad Widget .

ICC World Cup| ಆಸ್ಟ್ರೇಲಿಯಾ ಮಣಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್‌ನ 5ನೇ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳಿಂದ ಗೆದ್ದು ಬೀಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾ ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ 49.3 ಓವರ್​ಗಳಲ್ಲಿ 199 ರನ್​ಗಳಿಸಿ ಆಸ್ಟ್ರೇಲಿಯಾ ಆಲೌಟ್ ಆಯಿತು. 200 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆಸೀಸ್ ವೇಗಿಗಳು ಆರಂಭಿಕ ಆಘಾತ ನೀಡಿದರು. ಆರಂಭಿಕರಾದ ಇಶಾನ್ ಕಿಶನ್ (0) ಹಾಗೂ ರೋಹಿತ್ ಶರ್ಮಾ (0) ಶೂನ್ಯಕ್ಕೆ ಔಟಾದರೆ, ಆ ಬಳಿಕ ಶ್ರೇಯಸ್ ಅಯ್ಯರ್ ಕೂಡ ಸೊನ್ನೆ ಸುತ್ತಿ ನಿರ್ಗಮಿಸಿದರು.

Ad Widget . Ad Widget . Ad Widget .

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅದ್ಭುತ ಜೊತೆಯಾಟವಾಡಿದರು. 4ನೇ ವಿಕೆಟ್​ಗೆ 165 ರನ್ ಪೇರಿಸಿದ ಈ ಜೋಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಹಂತದಲ್ಲಿ 85 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಔಟಾದರು. ಇದಾಗ್ಯೂ ಅಜೇಯ 97 ರನ್ ಬಾರಿಸುವ ಮೂಲಕ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು 41.2 ಓವರ್​ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲೇ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Leave a Comment

Your email address will not be published. Required fields are marked *