ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದ ಸುಮಲತಾ ಅಂಬರೀಶ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಆದರೆ ಮೈತ್ರಿ ಘೋಷಣೆ ಬಳಿಕ ಬಿಜೆಪಿ ನಾಯಕರು ಸುಮಲತಾ ಅವರಿಂದ ಅಂತರ ಕಾಯ್ದುಕೊಳ್ಳುತ್ತಿರೋದು ಕಂಡು ಬರುತ್ತಿದೆ.
ಬಿಜೆಪಿಗೆ ಬೆಂಬಲ ಕೊಟ್ಟಿದ್ದ ಸುಮಲತಾ ಅಂಬರೀಶ್ಗೆ ಮುಂದಿನ ರಾಜಕೀಯ ಭವಿಷ್ಯದ ಟೆನ್ಷನ್ ಶುರುವಾಗಿದೆ. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯದಿಂದ ಸ್ಪರ್ಧೆ ಮಾಡಲು ಸುಮಲತಾ ಪ್ಲಾನ್ ಮಾಡಿಕೊಂಡಿದ್ದರು. ಆದ್ರೆ ಮೈತ್ರಿ ಬಳಿಕ ಎಲ್ಲವೂ ಬದಲಾಗಿದೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಂತರಿಕ ಸಭೆಗಳಿಗೆ ಸುಮಲತಾ ಅವರನ್ನು ಆಹ್ವಾನಿಸಲಾಗಿತ್ತು. ಈಗ ಮಂಡ್ಯ ಕಾರ್ಯಚಟುವಟಿಕೆಗಳಿಗೂ ಸುಮಲತಾರನ್ನು ಬಿಜೆಪಿ ಕರೆಯುತ್ತಿಲ್ಲ. ಅಷ್ಟೆ ಅಲ್ಲದೆ ಕಾವೇರಿ ವಿಚಾರವಾಗಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಹೋರಾಟದಲ್ಲಿಯೂ ಸುಮಲತಾ ಕಾಣಿಸಿಕೊಳ್ಳದಿರೋದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಬಸವರಾಜ್ ಬೊಮ್ಮಾಯಿ ಕೆಆರ್‌ಎಸ್ ವೀಕ್ಷಣೆ, ಅಶ್ವತ್ಥ ನಾರಾಯಣ್, ವಿಜಯೇಂದ್ರ ಹೋರಾಟದ ವೇಳೆಯೂ ಸುಮಲತಾ ಗೈರು ಆಗಿದ್ದರು. ಈ ಎಲ್ಲಾ ಬೆಳವಣಿಗೆಳು ಬಿಜೆಪಿ ಸಂಸದೆಯಿಂದ ಅಂತರ ಕಾಯ್ದುಕೊಳ್ಳುತ್ತಿದೆಯಾ ಎಂಬ ಅನುಮಾನ ಮೂಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅವರ ಮುಂದಿನ ನಡೆ ಏನು ಎಂಬುದು ಕುತೂಹಲಕಾರಿಯಾಗಿದೆ.